ನಿತೀಶ್ ಕುಮಾರ್ 
ದೇಶ

ದಾಖಲೆಯ 9ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಪದಗ್ರಹಣ; ಬಿಜೆಪಿಯ ವಿಜಯ್ ಕುಮಾರ್, ಸಾಮ್ರಾಟ್ ಚೌಧರಿ DCM!

ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಅವರು 9ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಪಾಟ್ನಾ(ಬಿಹಾರ): ಜೆಡಿಯು ಪಕ್ಷದ ಮುಖ್ಯಸ್ಥ ನಿತೀಶ್ ಕುಮಾರ್ ಅವರು 9ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಬಿಹಾರದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿತ್ತು. ಆರ್ ಜೆಡಿ ಜೊತೆ ಸೇರಿ ಸರ್ಕಾರ ರಚಿಸಿದ್ದ ನಿತೀಶ್ ಇದೀಗ ಮಹಾಘಟಬಂಧನ್ ನಿಂದ ಹೊರಬಂದಿದ್ದು ಇದೀಗ ಬಿಜೆಪಿ ಜೊತೆ ಸೇರಿ ಸರ್ಕಾರ ರಚಿಸಿದ್ದಾರೆ. ನಿತೀಶ್ ಕುಮಾರ್ ಪ್ರಮಾಣ ವಚನದ ವೇಳೆ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಿದರು. ನಂತರ ಬಿಜೆಪಿಯ ವಿಜಯ್ ಕುಮಾರ್ ಸಿನ್ಹಾ ಹಾಗೂ ಸಾಮ್ರಾಟ್ ಚೌಧರಿ ಅವರು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಹಾರದ ಇಂದು ರಾಜಕೀಯದಲ್ಲಿ ಹೊಸ ಬದಲಾವಣೆಯಾಗಿದೆ. ಬೆಳಗ್ಗೆ 11 ಗಂಟೆಗೆ ರಾಜಭವನಕ್ಕೆ ಆಗಮಿಸಿದ ಸಿಎಂ ನಿತೀಶ್ ಕುಮಾರ್ ಮಹಾಮೈತ್ರಿ ಸರ್ಕಾರಕ್ಕೆ ರಾಜೀನಾಮೆ ನೀಡಿದರು. ಇದಾದ ಬಳಿಕ ಮತ್ತೆ ಮಧ್ಯಾಹ್ನ 1 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚಿಸುವುದಾಗಿ ನಿತೀಶ್ ಕುಮಾರ್ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ