ಅಪಘಾತದ ಚಿತ್ರ 
ದೇಶ

ತಮಿಳುನಾಡು: ಸಿಮೆಂಟ್ ಲಾರಿ, ಕಾರು ನಡುವೆ ಡಿಕ್ಕಿ, ಆರು ಮಂದಿ ದುರ್ಮರಣ- ಭೀಕರ ಅಪಘಾತದ ವಿಡಿಯೋ

ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್‌ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ.

ಚೆನ್ನೈ: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯ ಪುಲಿಯಂಗುಡಿ ಬಳಿ ಭಾನುವಾರ ನಡೆದಿದೆ. ಟ್ರಕ್‌ನಲ್ಲಿ ಸಿಮೆಂಟ್ ಚೀಲಗಳನ್ನು ತುಂಬಲಾಗಿತ್ತು ಎಂದು ವರದಿಯಾಗಿದೆ.

ಅಪಘಾತದಿಂದಾಗಿ ಪುಲಿಯಂಗುಡಿದ  ಐವರು ನಿವಾಸಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಒಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಚೊಕ್ಕಂಪಟ್ಟಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರೆಲ್ಲರೂ  ಪುಲಿಯಂಗುಡಿಯ ಭಗವತಿ ಅಮ್ಮನ್ ದೇವಾಲಯ ಪ್ರದೇಶದವರಾಗಿದ್ದು, ಜನವರಿ 27 ರಂದು ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಲು ತೆರಳಿದ್ದರು ಎನ್ನಲಾಗಿದೆ.

ಉತ್ಸವದಲ್ಲಿ ಪಾಲ್ಗೊಂಡ ನಂತರ ಕುಟ್ರಾಲಂ ಜಲಪಾತ ವೀಕ್ಷಿಸಿ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿದೆ. ನಿದ್ರೆಯ ಮಂಪರಿನಲ್ಲಿದ್ದ ಕಾರು ಚಾಲಕ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಲಾರಿಯಡಿ ಸಿಲುಕಿದ ಕಾರು ಕೆಲ ಅಡಿಗಳವರೆಗೆ ಪಲ್ಟಿಯಾಗಿದೆ ಎನ್ನಲಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತಿರುನಲ್ವೇಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!