ದೇಶ

ದೇಶದಲ್ಲಿ ಎರಡು ಸಾವಿರದ ಗಡಿ ದಾಟಿದ JN.1 ಪ್ರಕರಣ

Lingaraj Badiger

ನವದೆಹಲಿ: ಕೊರೋನಾ ವೈರಸ್ ರೂಪಾಂತರಿ JN.1 ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾದ ನಂತರ ದೇಶಾದ್ಯಂತ ಆತಂಕ ಹೆಚ್ಚಾಗತೊಡಗಿದ್ದು, ಕೋವಿಡ್ ಸೋಂಕಿತರ ಜೊತೆಗೆ ರೂಪಾಂತರಿ JN.1 ಪ್ರಕರಣಗಳ ಸಂಖ್ಯೆ ಸೋಮವಾರ 2 ಸಾವಿರದ ಗಡಿ ದಾಟಿದೆ. 

ದೇಶದ 18 ರಾಜ್ಯಗಳಲ್ಲಿ ಇದುವರೆಗೆ 2,083 ಜೆಎನ್.1 ಪ್ರಕರಣಗಳು ವರದಿಯಾಗಿವೆ ಎಂದು ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ(INSACOG)ತಿಳಿಸಿದೆ.

ಕಳೆದ ತಿಂಗಳು, ದೇಶದಲ್ಲಿ ಹೊಸ ರೂಪಾಂತರಿ ಪ್ರಕರಣ ಪತ್ತೆಯಾದ ನಂತರ ಕೇಂದ್ರ ಸರ್ಕಾರ ನಿರಂತರ ಕಟ್ಟೆಚ್ಚರ ವಹಿಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿತ್ತು.

ದೇಶದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತು JN.1 ರೂಪಾಂತರಿ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ತಕ್ಷಣಕ್ಕೆ ಆತಂಕ ಪಡುವ ಅಗತ್ಯ ಇಲ್ಲ. ಸೋಂಕಿತರಲ್ಲಿ ಹೆಚ್ಚಿನವರು ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇದು ಸೌಮ್ಯ ಅನಾರೋಗ್ಯವನ್ನು ಸೂಚಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

SCROLL FOR NEXT