ಮೌಲ್ವಿ ವಿರುದ್ಧ ಫತ್ವಾ 
ದೇಶ

Ayodhya Ram Mandir ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮೌಲ್ವಿ ವಿರುದ್ಧ ಫತ್ವಾ ಜಾರಿ!

ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರುವೊಬ್ಬರ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.

ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರುವೊಬ್ಬರ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.

ಅಯೋಧ್ಯೆಯಲ್ಲಿ ಜನವರಿ 22 ರಂದು ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಮುಖ ಮುಸ್ಲಿಂ ಧರ್ಮಗುರು ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್‌ನ ಮುಖ್ಯ ಇಮಾಮ್ ಡಾ. ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ವಿರುದ್ಧ ‘ಫತ್ವಾ’ ಹೊರಡಿಸಲಾಗಿದೆ.

ಇಲ್ಯಾಸಿ ಅವರು ತನ್ನ ವಿರುದ್ಧ ‘ಫತ್ವಾ’ ಹೊರಡಿಸಿರುವುದನ್ನು ಖಚಿತಪಡಿಸಿದ್ದು, “ಮುಖ್ಯ ಇಮಾಮ್ ಆಗಿ, ನಾನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಆಹ್ವಾನವನ್ನು ಸ್ವೀಕರಿಸಿದ್ದೇನೆ. ನಾನು ಎರಡು ದಿನ ಆಲೋಚಿಸಿ ನಂತರ ದೇಶಕ್ಕಾಗಿ ಸೌಹಾರ್ದತೆಗಾಗಿ ಅಯೋಧ್ಯೆಗೆ ಹೋಗಲು ನಿರ್ಧರಿಸಿದೆ ಎಂದು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿದ್ದಾರೆ.

“ನಿನ್ನೆ ಫತ್ವಾ ಹೊರಡಿಸಲಾಗಿದೆ, ಆದರೆ ಜನವರಿ 22 ರ ಸಂಜೆಯಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ. ನಾನು ಕೆಲವು ಕರೆಗಳನ್ನು ರೆಕಾರ್ಡ್ ಮಾಡಿದ್ದೇನೆ, ಅದರಲ್ಲಿ ಕರೆ ಮಾಡಿದವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ. ನನ್ನನ್ನು ಪ್ರೀತಿಸುವವರು, ರಾಷ್ಟ್ರವನ್ನು ಪ್ರೀತಿಸುವವರು ನನ್ನನ್ನು ಬೆಂಬಲಿಸುತ್ತಾರೆ. ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ನನ್ನನ್ನು ದ್ವೇಷಿಸುವವರು ಬಹುಶಃ ಪಾಕಿಸ್ಥಾನಕ್ಕೆ ಹೋಗಬೇಕು. ನಾನು ಪ್ರೀತಿಯ ಸಂದೇಶವನ್ನು ನೀಡಿದ್ದೇನೆ, ನಾನು ಯಾವುದೇ ಅಪರಾಧ ಮಾಡಿಲ್ಲ. ನಾನು ಕ್ಷಮೆಯಾಚಿಸುವುದಿಲ್ಲ ಅಥವಾ ರಾಜೀನಾಮೆ ನೀಡುವುದಿಲ್ಲ, ಅವರು ಏನು ಬೇಕಾದರೂ ಮಾಡಬಹುದು”ಎಂದು ಇಲ್ಯಾಸಿ ಆತಂಕ ವ್ಯಕ್ತಪಡಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್