ಪ್ರತಿಪಕ್ಷಗಳ ಸಂಸದರು 
ದೇಶ

ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರತಿಪಕ್ಷಗಳ 14 ಸಂಸದರ ಅಮಾನತು ಹಿಂದಕ್ಕೆ!

ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನಾದಿನ ಕಳೆದ ಅಧಿವೇಶನದಲ್ಲಿ ಅಮಾನತುಗೊಂಡಿದ್ದ ಪ್ರತಿಪಕ್ಷಗಳ 14 ಸಂಸದರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

ನವದೆಹಲಿ: ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನಾದಿನ ಕಳೆದ ಅಧಿವೇಶನದಲ್ಲಿ ಅಮಾನತುಗೊಂಡಿದ್ದ ಪ್ರತಿಪಕ್ಷಗಳ 14 ಸಂಸದರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

ಸಂಬಂಧಪಟ್ಟ ವಿಶೇಷಾಧಿಕಾರ ಸಮಿತಿಯೊಂದಿಗೆ ಮಾತನಾಡಿ ಅಮಾನತುಗೊಂಡಿದ್ದ ಪ್ರತಿಪಕ್ಷಗಳ 14 ಸಂಸದರ ಅಮಾನತು ಹಿಂಪಡೆಯುವಂತೆ ಉಭಯ ಸದನಗಳ ಸಭಾಧ್ಯಕ್ಷರು ಮತ್ತು ಸಭಾಪತಿಗಳಿಗೆ ಸರ್ಕಾರದ ಮನವಿ ಮಾಡಿದ್ದು, ಮನವಿಗೆ ಒಪ್ಪಿಗೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದಲ್ಲಿ ನಿರಂತರ ಪ್ರತಿಭಟನೆ ನಡೆಸಿ ಕಲಾಪಕ್ಕೆ ಅಡ್ಡಿಪಡಿಸಿದ್ದ ಸಂಸದರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಅವರ ನಡವಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ನಂತರ ಅವರ ಅಮಾನತು ಹಿಂಪಡೆಯುವಂತೆ ಲೋಕಸಭೆ ಮತ್ತು ರಾಜ್ಯಸಭೆಯ ಎರಡೂ ಸಮಿತಿಗಳು ಶಿಫಾರಸು ಮಾಡಿದ್ದವು.

ಒಟ್ಟು 146 ಪ್ರತಿಪಕ್ಷ ಸಂಸದರ ಪೈಕಿ 132 ಸಂಸದರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿತ್ತು. ಉಳಿದ 14 ಸಂಸದರನ್ನು ಹಕ್ಕುಬಾಧ್ಯತಾ ಸಮಿತಿಗಳು ನಿರ್ಧರಿಸುವವರೆಗೆ ಅಮಾನತುಗೊಳಿಸಲಾಗಿತ್ತು.

‘ಎಲ್ಲರ ಅಮಾನತು ಹಿಂಪಡೆಯಲಾಗುವುದು. ನಾವು ಸರ್ಕಾರದ ಪರವಾಗಿ ಸ್ಪೀಕರ್ ಮತ್ತು ಸಭಾಪತಿಗೆ ಮನವಿ ಮಾಡಿದ್ದೇವೆ ಮತ್ತು ಅವರು ಒಪ್ಪಿಗೆ ನೀಡಿದ್ದಾರೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

IPL 2026: B***s Of Steel" ರವಿಶಾಸ್ತ್ರಿ ಹೇಳಿಕೆ ಕುರಿತು ನೆಟ್ಟಿಗರಿಂದ ತೀವ್ರ ಚರ್ಚೆ!

ಇರಾನ್ ನಲ್ಲಿ ಬೃಹತ್ ಸೇನಾ ಕಾರ್ಯಾಚರಣೆ: ಹಲವು ಮಿಲಿಟರಿ ನಾಯಕರ ಹತ್ಯೆ- ಡೊನಾಲ್ಡ್ ಟ್ರಂಪ್! Video

SCROLL FOR NEXT