ದೇಶ

ಬೆಳಿಗ್ಗೆ ತೀವ್ರ ಚಳಿ, ಮಧ್ಯಾಹ್ನ ಹೆಚ್ಚಾಗಲಿದೆ ಉಷ್ಣಾಂಶ!; 11 ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Srinivas Rao BV

ಬೆಂಗಳೂರು/ ನವದೆಹಲಿ:  ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಮತ್ತೆ ಚಳಿ ಹೆಚ್ಚಾಗುತ್ತಿದೆ. ಬೆಳಿಗ್ಗೆ ತೀವ್ರ ಚಳಿ ಇದ್ದರೆ, ಮಧ್ಯಾಹ್ನದ ವೇಳೆಗೆ ಉಷ್ಣಾಂಶವೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದ್ದರೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಲು ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀದಿದೆ. 

ರಾಜ್ಯದಲ್ಲಿ ಮಳೆಯಾಗುವ ಸೂಚನೆ ಇಲ್ಲ. ಆದರೆ ಉತ್ತರ ಭಾರತದ ಪ್ರದೇಶಗಳಲ್ಲಿರುವ 11 ರಾಜ್ಯಗಳಲ್ಲಿ ಇಂದು ಅಥವಾ ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ಮುಂದಿನ 2 ದಿನಗಳಲ್ಲಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ದಟ್ಟವಾದ ಮಂಜು ಆವರಿಸಿದ, ತೀವ್ರ ಚಳಿಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ನಂತರ ಕ್ರಮೇಣ ಸುಧಾರಿಸುತ್ತದೆ ಎಂದು ಹವಾಮಾನ ಸಂಸ್ಥೆ ಎಚ್ಚರಿಸಿದೆ.

SCROLL FOR NEXT