ಮನ್ವೇಂದ್ರ ಸಿಂಗ್ 
ದೇಶ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; ಜಸ್ವಂತ್ ಸಿಂಗ್ ಸೊಸೆ ಸಾವು, ಪುತ್ರನಿಗೆ ಗಾಯ

ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಅಲ್ವಾರ್‌ನಲ್ಲಿ ಅಪಘಾತಕ್ಕೀಡಾಗಿದೆ.

ನವದೆಹಲಿ: ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ಕಾಂಗ್ರೆಸ್ ನಾಯಕ ಮನ್ವೇಂದ್ರ ಸಿಂಗ್ ಮತ್ತು ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯ ಅಲ್ವಾರ್‌ನಲ್ಲಿ ಅಪಘಾತಕ್ಕೀಡಾಗಿದೆ.

ಭೀಕರ ಅಪಘಾತದಲ್ಲಿ ಮನ್ವೇಂದ್ರ ಸಿಂಗ್ ಅವರ ಪತ್ನಿ ಸಾವನ್ನಪ್ಪಿದ್ದಾರೆ. ಮಾಜಿ ಸಂಸದ ಮನ್ವೇಂದ್ರ ಸಿಂಗ್ ಮತ್ತು ಅವರ ಪುತ್ರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನ್ವೇಂದ್ರ ಸಿಂಗ್ ಮತ್ತು ಅವರ ಕುಟುಂಬ ದೆಹಲಿಯಿಂದ ಜೈಪುರಕ್ಕೆ ತೆರಳುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಕಾರು ಗೋಡೆಗೆ ಡಿಕ್ಕಿ ಹೊಡೆದಿದೆ.

ಮನ್ವೇಂದ್ರ ಸಿಂಗ್ ಅವರು 2004 ಮತ್ತು 2009 ರ ನಡುವೆ ಲೋಕಸಭೆಯ ಸದಸ್ಯರಾಗಿದ್ದರು ಮತ್ತು ರಾಜಸ್ಥಾನದ ಬಾರ್ಮರ್-ಜೈಸಲ್ಮೇರ್ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ