ಮಲ್ಲಿಕಾರ್ಜುನ ಖರ್ಗೆ 
ದೇಶ

ರಾಷ್ಟ್ರಪತಿ ಭಾಷಣದಲ್ಲಿ ಅಲ್ಪಸಂಖ್ಯಾತರ ಪ್ರಸ್ತಾಪವಿಲ್ಲ, ನಿರಾಶಾದಾಯಕ: ರಾಜ್ಯಸಭೆ ವಿರೋಧ ಪಕ್ಷದ ನಾಯಕ ಖರ್ಗೆ

ಕಳೆದ ಒಂದು ವರ್ಷದಿಂದ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ಪ್ರಧಾನಿ ಭೇಟಿ ನೀಡಿಲ್ಲ. ಅವರು ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರು ಎಂದರು.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ನಿರಾಶೆ ವ್ಯಕ್ತಪಡಿಸಿದ್ದು, ಸಮಾಜದ ದುರ್ಬಲ ವರ್ಗದವರಿಗೆ ಸೌಲಭ್ಯಗಳ ಕೊರತೆಯಂತಹ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬರೀ ಸರ್ಕಾರ ಹೊಗಳವುದರಲ್ಲಿಯೇ ತುಂಬಿದೆ ಎಂದಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಖರ್ಗೆ, ರಾಷ್ಟ್ರಪತಿ ಭಾಷಣವನ್ನು ಸರ್ಕಾರ ರಚಿಸಿದೆ. ಸದನದಲ್ಲಿ ‘ಜೈ ಸಂವಿಧಾನ 'ಘೋಷಣೆಯೊಂದಿಗೆ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂಸದರು ಮತ್ತು ಪಕ್ಷಗಳಿವೆ.

ರಾಷ್ಟ್ರಪತಿಗಳ ಜಂಟಿ ಭಾಷಣದಲ್ಲಿ ಯಾವುದೇ ದೂರದೃಷ್ಟಿ ಮತ್ತು ನಿರ್ದೇಶನ ಇಲ್ಲ. ಬಡವರು, ದಲಿತರು ಮತ್ತು ಅಲ್ಪಸಂಖ್ಯಾತರ ಪ್ರಸ್ತಾಪವಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಟೀಕಾ ಪ್ರಹಾರ ನಡೆಸಿದ ಖರ್ಗೆ, ವಿಪಕ್ಷಗಳು ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ಮಾತನಾಡುತ್ತವೆ. ಆದರೆ ಮೋದಿ ಅವರು ಕೇವಲ 'ಮನ್ ಕಿ ಬಾತ್' ಮಾಡುತ್ತಾರೆ. ಕಳೆದ ಒಂದು ವರ್ಷದಿಂದ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ಪ್ರಧಾನಿ ಭೇಟಿ ನೀಡಿಲ್ಲ. ಅವರು ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರು ಎಂದರು.

ಪ್ರಧಾನಿ ಮೋದಿಯ ಚುನಾವಣಾ ಸಮಯದಲ್ಲಿ ತಮ್ಮ ಭಾಷಣಗಳ ಮೂಲಕ ಸಮಾಜ ಒಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಈ ಹಿಂದೆ ಯಾವ ಪ್ರಧಾನಿಯೂ ಈ ರೀತಿ ಮಾಡಿಲ್ಲ. ಇದಲ್ಲದೆ, ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಮತ್ತು ಬಿಆರ್ ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಅವುಗಳ ಮೂಲ ಸ್ಥಳಗಳಿಗೆ ಮರುಸ್ಥಾಪಿಸಬೇಕು ಎಂದು ರಾಜ್ಯಸಭಾ ಅಧ್ಯಕ್ಷರನ್ನು ಒತ್ತಾಯಿಸಿದರು.

ಪ್ರತಿಮೆಗಳನ್ನು ಸಂಸತ್ ಸಂಕೀರ್ಣದ ಹಿಂಭಾಗದಲ್ಲಿರುವ ಸಮರ್ಪಿತ ಪ್ರದೇಶವಾದ ಪ್ರೇರಣಾ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಈ ನಿರ್ಧಾರವನ್ನು ವಿರೋಧ ಪಕ್ಷಗಳು ತೀವ್ರವಾಗಿ ಟೀಕಿಸಿದ್ದು, ಹಿಂಪಡೆಯಲು ಒತ್ತಾಯಿಸುತ್ತಿವೆ. ಮಹಾತ್ಮಾ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರ ಪ್ರತಿಮೆಗಳನ್ನು ಮುಂಭಾಗದಿಂದ ಹಿಂಭಾಗ' ಪ್ರೇರಣಾ ಸ್ಥಳ' ಸ್ಥಳಕ್ಕೆ ಸ್ಥಳಾಂತರ ವಿಷಯದ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರೊಂದಿಗೆ ಖರ್ಗೆ ಮಾತುಕತೆ ನಡೆಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT