ದೇಶ

NEET-UG ಮರು ಪರೀಕ್ಷೆ ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳ ರ‍್ಯಾಂಕಿಂಗ್'ನಲ್ಲಿ ಬದಲಾವಣೆ!

ಈ ಹಿಂದೆ ಮರು ಪರೀಕ್ಷೆ ಬರೆಯಲು ಅನುಮತಿ ಸಿಕ್ಕ 1,563 ಅಭ್ಯರ್ಥಿಗಳಿಗೆ ಈ ಮರು ಪರೀಕ್ಷೆಯನ್ನು ನಡೆಸಲಾಗಿದ್ದು ಅವರ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ.

ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ಪರಿಷ್ಕೃತ ರ‍್ಯಾಂಕಿಂಗ್ ಪಟ್ಟಿಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಸೋಮವಾರ ಪ್ರಕಟಿಸಿದೆ.

ಈ ಹಿಂದೆ ಮರು ಪರೀಕ್ಷೆ ಬರೆಯಲು ಅನುಮತಿ ಸಿಕ್ಕ 1,563 ಅಭ್ಯರ್ಥಿಗಳಿಗೆ ಈ ಮರು ಪರೀಕ್ಷೆಯನ್ನು ನಡೆಸಲಾಗಿದ್ದು ಅವರ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ.

ಈ ಫಲಿತಾಂಶ ಪ್ರಕಟದ ಜೊತೆಗೆ ಎಲ್ಲಾ 24 ಲಕ್ಷ ವಿದ್ಯಾರ್ಥಿಗಳ ರಾಂಕಿಂಗ್ ಕೂಡ ಬದಲಾಗಿದ್ದು, ತಮ್ಮ ತಮ್ಮ ರ್ಯಾಂಕಿಂಗ್ ಯಾವ ಹಂತದಲ್ಲಿ ಏರಿಳಿತವಾದಿರಬಹುದು ಎಂಬುದನ್ನು ವಿದ್ಯಾರ್ಥಿಗಳು ಪರಿಶೀಲಿಸುತ್ತಿದ್ದಾರೆ.

ಮೇ 5 ರಂದು ನಡೆದ ಮೂಲ ನೀಟ್ ಯುಜಿ ಪರೀಕ್ಷೆಯ ಸಮಯದಲ್ಲಿ ಉಂಟಾದ “ಸಮಯದ ನಷ್ಟ” ದಿಂದಾಗಿ ಹೆಚ್ಚುವರಿ ಅಂಕಗಳನ್ನು ಈ 1563 ವಿದ್ಯಾರ್ಥಿಗಳಿಗೆ ನೀಡಲಾಗಿತ್ತು.

ಸುಪ್ರೀಂ ಕೋರ್ಟ್ ತೀರ್ಪಿನ ನಂತರ, ಈ ಅಭ್ಯರ್ಥಿಗಳು ಪರೀಕ್ಷೆಯನ್ನು ಮರುಪಡೆಯಲು ಅಥವಾ ಗ್ರೇಸ್ ಅಂಕಗಳಿಲ್ಲದೆ ತಮ್ಮ ಮೂಲ ಅಂಕಗಳನ್ನು ಉಳಿಸಿಕೊಳ್ಳುವ ಆಯ್ಕೆಯನ್ನು ಕೊಡಲಾಗಿತ್ತು.

ಜೂನ್ 23 ರಂದು ನಡೆದ ಮರು ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳ ಪೈಕಿ 813 ಮಂದಿ ಮಾತ್ರ ಪರೀಕ್ಷೆ ಬರೆಯಲು ಮನಸ್ಸು ಮಾಡಿದ್ದರು.

ಜೂನ್ 4 ರಂದು ಘೋಷಿಸಲಾದ ಮೂಲ NEET UG 2024 ಪರೀಕ್ಷೆಯ ಫಲಿತಾಂಶಗಳು, ಪೇಪರ್ ಸೋರಿಕೆ ಮತ್ತು ಅಕ್ರಮಗಳ ಆರೋಪಗಳಿಂದ ವಿವಾದವನ್ನು ಎದುರಿಸಿದ್ದು, ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ಅಂದರೆ 67 ವಿದ್ಯಾರ್ಥಿಗಳು ಈ ಸಲ 720 ರಲ್ಲಿ 720 ಪರಿಪೂರ್ಣ ಅಂಕಗಳನ್ನು ಪಡೆದು ಒಟ್ಟಾರೆ ನೀಟ್ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜನರು ಮತ್ತು ಶಿಕ್ಷಣ ತಜ್ಞರಲ್ಲಿ ಅನುಮಾನ ಮೂಡಿಸಿತ್ತು. ಶಿಕ್ಷಣ ಸಚಿವಾಲಯವು ಈ ವಿಷಯವನ್ನು ನಂತರ ಸಿಬಿಐ ತನಿಖೆಗೆ ಒಪ್ಪಿಸಿದ್ದು, ಈಗ ಸಿಬಿಐ ತನಿಖೆ ನಡೆಯುತ್ತಿದೆ.

ಮರು ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ NTA ವೆಬ್‌ಸೈಟ್ https://neet.nta.nic.in/ ನಲ್ಲಿ ನೋಡಬಹುದಾಗಿದೆ. ವೆಬ್‌ಸೈಟ್‌ನಲ್ಲಿ ಒದಗಿಸಲಾದ ಹಂತಗಳನ್ನು ಅನುಸರಿಸುವ ಮೂಲಕ ಅವರು ತಮ್ಮ ಸ್ಕೋರ್‌ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT