ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ TNIE
ದೇಶ

ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಅರ್ಜಿ: ಸಿಬಿಐಗೆ ದೆಹಲಿ ಹೈಕೋರ್ಟ್ ನೋಟಿಸ್, ಜುಲೈ 17ಕ್ಕೆ ವಿಚಾರಣೆ ಮುಂದೂಡಿಕೆ

ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ನವದೆಹಲಿ: ಅಬಕಾರಿ ನೀತಿ 'ಹಗರಣ'ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಈ ಸಂಬಂಧ ಮಂಗಳವಾರ ಸಿಬಿಐಗೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ.

ಯಾವುದಾದರೂ ಮರುಪರಿಶೀಲನೆ ಇದ್ದರೆ ಎರಡು ದಿನಗಳಲ್ಲಿ ಮನವಿ ಸಲ್ಲಿಸಬಹುದು ಎಂದು ಹೈಕೋರ್ಟ್, ಕೇಜ್ರಿವಾಲ್ ಅವರ ವಕೀಲರು ಹೇಳಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ.

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್ ಅವರು, ವಿಚಾರಣಾ ನ್ಯಾಯಾಲಯದ ಜೂನ್ 26 ಸಿಬಿಐ ಕಸ್ಟಡಿಗೆ ಮತ್ತು ಜುಲೈ 12 ರವರೆಗೆ ನ್ಯಾಯಾಂಗ ಬಂಧನದ ಆದೇಶಗಳನ್ನು ಪ್ರಶ್ನಿಸಿದ್ದಾರೆ.

55 ವರ್ಷದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ತಿಹಾರ್ ಜೈಲಿನಿಂದ ಸಿಬಿಐ ಬಂಧಿಸಿತು. ಅಲ್ಲಿ ಅವರು ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿದ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!