ನಿನ್ನೆ ಸಂಸತ್ತಿನಲ್ಲಿ ಭಾಷಣ ಮಾಡುತ್ತಾ ಶಿವನ ಫೋಟೋ ಪ್ರದರ್ಶಿಸಿದ ರಾಹುಲ್ ಗಾಂಧಿ  
ದೇಶ

ವಿರೋಧ ಪಕ್ಷದ ನಾಯಕನ ಚೊಚ್ಚಲ ಭಾಷಣಕ್ಕೆ ಕತ್ತರಿ: ವಾಸ್ತವದಲ್ಲಿ ಸತ್ಯವನ್ನು ತೆಗೆದುಹಾಕಲು ಸಾಧ್ಯವಿಲ್ಲ- ರಾಹುಲ್ ಗಾಂಧಿ

ತೆಗೆದುಹಾಕಲಾದ ಭಾಗಗಳಲ್ಲಿ ಹಿಂದೂಗಳು ಮತ್ತು ಪಿಎಂ ನರೇಂದ್ರ ಮೋದಿ-ಬಿಜೆಪಿ-ಆರ್‌ಎಸ್‌ಎಸ್ ಇತರರ ಬಗ್ಗೆ ಅವರ ಮಾತುಗಳು ಕೂಡ ಸೇರಿವೆ.

ನವದೆಹಲಿ: ಅಲ್ಪಸಂಖ್ಯಾತರು, ನೀಟ್ ವಿವಾದ ಮತ್ತು ಅಗ್ನಿಪಥ್ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಲೋಕಸಭೆಯಲ್ಲಿ ನಿನ್ನೆ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರು ಮಾಡಿದ ಚೊಚ್ಚಲ ಭಾಷಣದ ಹಲವು ಭಾಗಗಳನ್ನು ಸ್ಪೀಕರ್ ಆದೇಶ ಮೇರೆಗೆ ಸಂಸತ್ತಿನ ದಾಖಲೆಗಳಿಂದ ತೆಗೆದುಹಾಕಲಾಗಿದೆ.

ತೆಗೆದುಹಾಕಲಾದ ಭಾಗಗಳಲ್ಲಿ ಹಿಂದೂಗಳು ಮತ್ತು ಪಿಎಂ ನರೇಂದ್ರ ಮೋದಿ-ಬಿಜೆಪಿ-ಆರ್‌ಎಸ್‌ಎಸ್ ಇತರರ ಬಗ್ಗೆ ಅವರ ಮಾತುಗಳು ಕೂಡ ಸೇರಿವೆ.

ನಿನ್ನೆ ಮಧ್ಯಾಹ್ನ ಲೋಕಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಭಾಷಣದಲ್ಲಿ, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬೋಧನೆ ದೇಶದಲ್ಲಿ ಹಿಂಸೆ ಮತ್ತು ದ್ವೇಷವನ್ನು ಹರಡುತ್ತಿದೆ ಎಂದು ಆರೋಪಿಸಿದರು. ಅವರ ಹೇಳಿಕೆಗಳಿಗೆ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಇತರರು ರಾಹುಲ್ ಗಾಂಧಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ "ಸುಳ್ಳು ಮಾತನಾಡುತ್ತಿದ್ದಾರೆ, ಸದನವನ್ನು ದಾರಿ ತಪ್ಪಿಸುತ್ತಿದ್ದಾರೆ, ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಟೀಕಿಸುತ್ತಿದ್ದಾರೆ ಎಂದು ಆರೋಪಿಸಿದರು.

ಇದಕ್ಕೆ ಮೋದಿ ಸರ್ಕಾರದ ವಿರುದ್ಧ ಪ್ರತ್ಯಾರೋಪಗಳ ಮೂಲಕ ಕಾಂಗ್ರೆಸ್ ತಿರುಗೇಟು ನೀಡಿದೆ. ಭಗವಾನ್ ಶಿವ, ಪ್ರವಾದಿ ಮೊಹಮ್ಮದ್, ಗುರುನಾನಕ್, ಜೀಸಸ್ ಕ್ರೈಸ್ಟ್, ಭಗವಾನ್ ಬುಧ ಮತ್ತು ಭಗವಾನ್ ಮಹಾವೀರರನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಅವರ ಬೋಧನೆಗಳಿಂದ ನಿರ್ಭಯತೆಯ ಕಲ್ಪನೆಯನ್ನು ತೆಗೆದುಕೊಂಡಿದ್ದೇನೆ ಎಂದು ಹೇಳಿದರು.

ಪ್ರಧಾನಿ ಮೋದಿ ಭಾಷಣದ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಕರೆಯುವುದು ಬಹಳ ಗಂಭೀರವಾದ ವಿಷಯ ಎಂದು ಪ್ರಧಾನಿ ಹೇಳಿದರು. ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದರು.

ರಾಹುಲ್ ಗಾಂಧಿ ಹೇಳಿಕೆಯನ್ನು ಖಂಡಿಸಲು ಬಿಜೆಪಿ ನಂತರ ಪತ್ರಿಕಾಗೋಷ್ಠಿ ನಡೆಸಿದರೆ, ಕಾಂಗ್ರೆಸ್ ಕೂಡ ಕೇಂದ್ರದ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಸಂಜೆ ಪತ್ರಿಕಾಗೋಷ್ಠಿ ನಡೆಸಿತು.

ರಾಹುಲ್ ಗಾಂಧಿ ಪ್ರತಿಕ್ರಿಯೆ: ತಮ್ಮ ಭಾಷಣದ ಭಾಗಗಳನ್ನು ಹೊರಹಾಕಿದ್ದಕ್ಕೆ ಇಂದು ಸಂಸತ್ತು ಕಲಾಪಕ್ಕೆ ತೆರಳುವ ವೇಳೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಮೋದಿಯವರೇ ಜಗತ್ತಿನಲ್ಲಿ ಸತ್ಯವನ್ನು ಹೊರಹಾಕಬಹುದು, ಆದರೆ ವಾಸ್ತವದಲ್ಲಿ ಸತ್ಯವನ್ನು ಹೊರಹಾಕಲು ಸಾಧ್ಯವಿಲ್ಲ, ನಾನು ಹೇಳಬೇಕಾಗಿದ್ದನ್ನು ಹೇಳಿದ್ದೇನೆ, ಅದು ಸತ್ಯ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT