ದಾರುಂಡಾ ಪ್ರದೇಶದಲ್ಲಿನ ಸೇತುವೆ ಕುಸಿತ 
ದೇಶ

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: 15 ದಿನಗಳಲ್ಲಿ 7ನೇ ಘಟನೆ

ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್‌ನಂತಹ ಜಿಲ್ಲೆಗಳಲ್ಲಿ ಇತ್ತೀಚೆಗೆ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಈ ಘಟನೆಗಳ ತನಿಖೆಗಾಗಿ ಬಿಹಾರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಪಾಟ್ನಾ: ಬಿಹಾರದಲ್ಲಿ ಸೇತುವೆಗಳ ಕುಸಿತ ಪ್ರಕರಣ ಮುಂದುವರೆದಿದೆ. ಇಂದು ಬೆಳಗ್ಗೆ ಸಿವಾನ್ ಜಿಲ್ಲೆಯ ಗಂಡಕಿ ನದಿಯ ಮೇಲಿನ ಸೇತುವೆಯ ಒಂದು ಭಾಗ ಕುಸಿದಿದೆ. ಇದು ಕಳೆದ 15 ದಿನಗಳಲ್ಲಿ ನಡೆದ ಏಳನೇ ಘಟನೆಯಾಗಿದೆ. ಜಿಲ್ಲೆಯ ಡಿಯೋರಿಯಾ ಬ್ಲಾಕ್‌ನಲ್ಲಿದ್ದ ಸಣ್ಣ ಸೇತುವೆ ಮಹರಾಜ್ ಗಂಜ್ ನೊಂದಿಗೆ ಅನೇಕ ಗ್ರಾಮಗಳನ್ನು ಸಂಪರ್ಕಿಸುತಿತ್ತು. ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿವಾನ್‌ನಲ್ಲಿ ಕಳೆದ 11 ದಿನಗಳಲ್ಲಿ ನಡೆದ ಎರಡನೇ ಸೇತುವೆ ಕುಸಿತದ ಘಟನೆ ಇದಾಗಿದೆ.

ಘಟನೆಗೆ ನಿಖರ ಕಾರಣ ತಿಳಿಯಲು ತನಿಖೆ ಪ್ರಗತಿಯಲ್ಲಿದೆ ಎಂದು ಉಪ ಅಭಿವೃದ್ಧಿ ಆಯುಕ್ತ ಮುಕೇಶ್ ಕುಮಾರ್ ತಿಳಿಸಿದ್ದಾರೆ. ಬ್ಲಾಕ್‌ನ ಹಿರಿಯ ಅಧಿಕಾರಿಗಳು ಈಗಾಗಲೇ ಸ್ಥಳಕ್ಕೆ ತೆರಳಿದ್ದಾರೆ. ಮುಂಜಾನೆ 5 ಗಂಟೆಯ ಸುಮಾರಿಗೆ ಘಟನೆ ನಡೆದಿದೆ ಪ್ರಾಥಮಿಕ ಮಾಹಿತಿಯ ಪ್ರಕಾರ, 1982-83 ರಲ್ಲಿ ನಿರ್ಮಿಸಲಾದ ಸೇತುವೆ ದುರಸ್ತಿ ಕಾರ್ಯ ಕಳೆದ ಕೆಲವು ದಿನಗಳಿಂದ ನಡೆಯುತ್ತಿದೆ ಎಂದು ತಿಳಿದುಬಂದಿದೆ ಎಂದು ಕುಮಾರ್ ಹೇಳಿದರು.

ಈ ಹಿಂದೆ ಸುರಿದ ಭಾರೀ ಮಳೆಯಿಂದಾಗಿ ಗಂಡಕಿ ನದಿಯ ರಭಸಕ್ಕೆ ಸೇತುವೆ ಕುಸಿದಿರಬಹುದೆಂದು ಗ್ರಾಮಸ್ಥರು ಸೂಚಿಸಿದ್ದಾರೆ. ಈ ಘಟನೆಯು ಬಿಹಾರದ ಮೂಲಸೌಕರ್ಯ ಸ್ಥಿತಿಯ ಬಗ್ಗೆ ಆತಂಕವನ್ನು ಹೆಚ್ಚಿಸುತ್ತಿದೆ. ಜೂನ್ 22 ರಂದು ದಾರುಂಡಾ ಪ್ರದೇಶದಲ್ಲಿನ ಸೇತುವೆಯೊಂದರ ಭಾಗ ಕುಸಿದಿತ್ತು. ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್‌ನಂತಹ ಜಿಲ್ಲೆಗಳಲ್ಲಿ ಇತ್ತೀಚೆಗೆ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಈ ಘಟನೆಗಳ ತನಿಖೆಗಾಗಿ ಬಿಹಾರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ