ನವದೆಹಲಿ: ಎನ್‌ಟಿಎಯ "ಪರೀಕ್ಷೆಗಳನ್ನು ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲು ಅಸಮರ್ಥತೆ" ಯಿಂದ ಲಕ್ಷಗಟ್ಟಲೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯದಲ್ಲಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು ಮತ್ತು ಎಲ್ಲಾ ಅಭ್ಯರ್ಥಿಗಳಿಗೆ NEET-UG ನ ಹೊಸ ದಿನಾಂಕಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
ಎನ್ಇಇಟಿ ಅಕ್ರಮಗಳನ್ನು ವಿರೋಧಿಸಿ ಇಂದು ವಿದ್ಯಾರ್ಥಿ ಸಂಘಟನೆಗಳು ಸಂಸತ್ ಗೆ ಪ್ರತಿಭಟನಾ ಮೆರವಣಿಗೆ ನಡೆಸಲಿವೆ.
ಎನ್ಇಇಟಿ ಪರೀಕ್ಷೆಗಳನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯನ್ನು ರದ್ದುಗೊಳಿಸಬೇಕೆಂದು ಎಂದು ವಿದ್ಯಾರ್ಥಿ ಸಂಘಟನೆಗಳು ಮನವಿ ಮಾಡಿವೆ.
ಸಂಸತ್ ಗೆ ಪ್ರತಿಭಟನಾ ಮೆರವಣಿಗೆ ಕೊಂಡೊಯ್ಯುವುದರ ಬಗ್ಗೆ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿರುವ ವಿದ್ಯಾರ್ಥಿ ಸಂಘಟನೆಗಳ ಮುಖಂಡರು, ಎನ್ಇಇಟಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಯಲ್ಲಿ ಅಕ್ರಮಗಳ ಘಟನೆಗಳ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಎಡ-ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (AISA), ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಮತ್ತು ಆಲ್ ಇಂಡಿಯಾ ಸ್ಟೂಡೆಂಟ್ಸ್ ಫೆಡರೇಶನ್ (AISF), ಜೊತೆಗೆ ಸಮಾಜವಾದಿ ಛತ್ರ ಸಭಾ ಮತ್ತು ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕವಾದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI)ದ ಪ್ರತಿನಿಧಿಗಳು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಎನ್‌ಟಿಎಯ "ಪರೀಕ್ಷೆಗಳನ್ನು ನ್ಯಾಯಯುತ ಮತ್ತು ಪಾರದರ್ಶಕ ರೀತಿಯಲ್ಲಿ ನಡೆಸಲು ಅಸಮರ್ಥತೆ" ಯಿಂದ ಲಕ್ಷಗಟ್ಟಲೆ ವಿದ್ಯಾರ್ಥಿಗಳ ಭವಿಷ್ಯವು ಅಪಾಯದಲ್ಲಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು ಮತ್ತು ಎಲ್ಲಾ ಅಭ್ಯರ್ಥಿಗಳಿಗೆ NEET-UG ನ ಹೊಸ ದಿನಾಂಕಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.