ಪ್ರಧಾನಿ ಮೋದಿ 
ದೇಶ

ನಮ್ಮ ಸರ್ಕಾರ 10 ವರ್ಷ ಪೂರೈಸಿದೆ, ಇನ್ನೂ 20 ವರ್ಷ ಅಧಿಕಾರದಲ್ಲಿರುತ್ತದೆ: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ

ಪ್ರತಿಪಕ್ಷಗಳು ದೇಶದ ಜನರ ನಿರ್ಧಾರಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ ಮಾಡುತ್ತಿವೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

ನವದೆಹಲಿ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಒಂದು ದಿನದ ನಂತರ ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಜ್ಯಸಭೆಯಲ್ಲೂ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ನವೆಂಬರ್ 24 ರಂದು ನಾವು ಸಂವಿಧಾನ ದಿನ ಆಚರಿಸಲು ನಿರ್ಧರಿಸಿದಾಗ ಈಗ ಸಂವಿಧಾನದ ಪುಸ್ತಕ ಹಿಡಿದುಕೊಂಡು ಓಡಾಡುತ್ತಿರುವವರು ಅದನ್ನು ವಿರೋಧಿಸಿದರು ಎಂದು ತಿರುಗೇಟು ನೀಡಿದರು.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮೋದಿ, ಸಂವಿಧಾನದ ಕಾರಣದಿಂದ ನನಗೆ ಇಲ್ಲಿಗೆ ಬರಲು ಅವಕಾಶ ಸಿಕ್ಕಿತು. ಸಂವಿಧಾನದ ಆಶಯ ನಮಗೆ ಅಮೂಲ್ಯ. ಸಂವಿಧಾನವು ನಮಗೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದರು.

ನಮ್ಮ ಸರ್ಕಾರ 10 ವರ್ಷಗಳನ್ನು ಪೂರೈಸಿದೆ, ಇನ್ನೂ 20 ವರ್ಷ ಪೂರೈಸಬೇಕಿದೆ. ಕಳೆದ 10 ವರ್ಷಗಳಲ್ಲಿ ಸಮರ್ಪಣಾ ಮನೋಭಾವ ಮತ್ತು ನಿರಂತರ ಸೇವೆಯೊಂದಿಗೆ ಮಾಡಿದ ಕೆಲಸವನ್ನು ಸಾರ್ವಜನಿಕರು ಪೂರ್ಣ ಹೃದಯದಿಂದ ಬೆಂಬಲಿಸಿದ್ದಾರೆ. ನಾಡಿನ ಜನತೆ ಆಶೀರ್ವಾದ ಮಾಡಿದ್ದಾರೆ. ದೇಶದ ಜನತೆ ಅಪಪ್ರಚಾರವನ್ನು ಸೋಲಿಸಿದ್ದಾರೆ, ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದಾರೆ. ವಿಶ್ವಾಸ ರಾಜಕಾರಣಕ್ಕೆ ಗೆಲುವಿನ ಮುದ್ರೆ ಹಾಕಲಾಗಿದೆ ಎಂದರು.

ಆದರೆ ಪ್ರತಿಪಕ್ಷಗಳು ದೇಶದ ಜನರ ನಿರ್ಧಾರಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ ಮಾಡುತ್ತಿವೆ ಎಂದು ಪ್ರಧಾನಿ ಮೋದಿ ಆರೋಪಿಸಿದರು.

60 ವರ್ಷಗಳ ನಂತರ, 10 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳಿದೆ. ಇದು ಸಾಮಾನ್ಯ ವಿಷಯವಲ್ಲ ಎಂದು ನಾನು ಅರ್ಥಮಾಡಿಕೊಂಡಿದ್ದೇನೆ. ಸಾರ್ವಜನಿಕರು ನೀಡಿದ ಈ ನಿರ್ಧಾರಕ್ಕೆ ಕೆಲವರು ಉದ್ದೇಶಪೂರ್ವಕವಾಗಿ ಕಪ್ಪುಚುಕ್ಕೆ ತರಲು ಪ್ರಯತ್ನಿಸಿದರು ಎಂದರು.

ಈ ವೇಳೆ ವಿರೋಧ ಪಕ್ಷಗಳು ಪ್ರಧಾನಿ ಭಾಷಣಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದವು. ರಾಜ್ಯಸಭೆಯನ್ನು ಮುಂದೂಡಿ, ಸುಳ್ಳು ಹೇಳುವುದನ್ನು ನಿಲ್ಲಿಸಿ ಎಂದು ಒತ್ತಾಯಿಸಿ ರಾಜ್ಯಸಭೆಯಿಂದ ಹೊರನಡೆದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT