ಹತ್ರಾಸ್ ಜಿಲ್ಲೆಯಲ್ಲಿ ಧಾರ್ಮಿಕ ಸಭೆಯೊಂದರಲ್ಲಿ ಕಾಲ್ತುಳಿತ ಸಂಭವಿಸಿದ ನಂತರ ಆಘಾತ ಕೇಂದ್ರದ ಹೊರಗೆ ಸಂತ್ರಸ್ತರು. 
ದೇಶ

ಹತ್ರಾಸ್ ಕಾಲ್ತುಳಿತ: ಸಂಘಟಕರ ವಿರುದ್ಧ FIR, ಇಂದು ಸಿಎಂ ಯೋಗಿ ಭೇಟಿ ಸಾಧ್ಯತೆ

ಸಿಕಂದರ ರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿಯಲ್ಲಿ (FIR) 'ಮುಖ್ಯ ಸೇವಾದಾರ' ದೇವಪ್ರಕಾಶ್ ಮಧುಕರ್ ಮತ್ತು ಇತರ ಸಂಘಟಕರನ್ನು ಹೆಸರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಲಖನೌ: ಕಾಲ್ತುಳಿತದಿಂದ 120ಕ್ಕೂ ಹೆಚ್ಚು ಜನರು ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಹತ್ರಾಸ್‌ನಲ್ಲಿ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಹತ್ರಾಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿನ್ನೆ ತಡರಾತ್ರಿ ಸಿಕಂದರ ರಾವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿಯಲ್ಲಿ (FIR) 'ಮುಖ್ಯ ಸೇವಾದಾರ' ದೇವಪ್ರಕಾಶ್ ಮಧುಕರ್ ಮತ್ತು ಇತರ ಸಂಘಟಕರನ್ನು ಹೆಸರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 105 (ನರಹತ್ಯೆ ಕೊಲೆಗೆ ಸಮನಾಗಿರುವುದಿಲ್ಲ), 110 (ನರಹತ್ಯೆ ಮಾಡಲು ಯತ್ನ), 126 (2) (ತಪ್ಪು ಸಂಯಮ), 223 (ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅವಿಧೇಯತೆ), 238 (ಸಾಕ್ಷ್ಯ ಕಣ್ಮರೆಯಾಗುತ್ತದೆ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಕಾರಣದ ಬಗ್ಗೆ ತನಿಖೆ ನಡೆಸಲು ಎಡಿಜಿ ಆಗ್ರಾ ಮತ್ತು ಅಲಿಗಢ ವಿಭಾಗೀಯ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. 24 ಗಂಟೆಯೊಳಗೆ ವರದಿ ಸಲ್ಲಿಸಬೇಕು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ನಿನ್ನೆ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ನಮ್ಮ ಸರ್ಕಾರವು ಈ ಘಟನೆಯ ತಳದಿಂದ ಕಾರಣಗಳನ್ನು ತಿಳಿದುಕೊಂಡು ಸಂಚುಕೋರರು ಮತ್ತು ಹೊಣೆಗಾರರಿಗೆ ಸೂಕ್ತ ಶಿಕ್ಷೆಯನ್ನು ನೀಡುತ್ತದೆ. ರಾಜ್ಯ ಸರ್ಕಾರವು ಈ ಸಂಪೂರ್ಣ ಘಟನೆ ಬಗ್ಗೆ ತನಿಖೆ ನಡೆಸುತ್ತಿದೆ. ಇದು ಆಕಸ್ಮಿಕ ಘಟನೆಯೋ, ಪಿತೂರಿಯೋ ಎಂದು ನೋಡುತ್ತಿದ್ದೇವೆ ಎಂದರು.

ದುರಂತ ಘಟನೆಯ ಬಗ್ಗೆ ರಾಜಕೀಯವಾಗಿ ಮಾತನಾಡುವುದು ಸರಿಯಲ್ಲ ಎಂದು ರಾಜಕೀಯ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಂತಹ ಘಟನೆಯಲ್ಲಿ ರಾಜಕೀಯ ಮಾಡುವುದು ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ, ಸಂತ್ರಸ್ತರಿಗೆ ಸೂಕ್ತ ಚಿಕಿತ್ಸೆ ನೀಡಬೇಕಾದ ಸಮಯವಿದು. ಪರಿಸ್ಥಿತಿ ಸೂಕ್ಷ್ಮವಾಗಿದೆ. ಈ ವಿಷಯವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದರು.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾರಾಯಣ ಸಕರ್ ವಿಶ್ವ ಹರಿ ಎಂದು ಪ್ರಸಿದ್ಧರಾದ ಭೋಲೆ ಬಾಬಾ ಅವರ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಸೇರಿದ್ದರು. ಜಿಲ್ಲಾಡಳಿತ ನೀಡಿದ್ದ ಅನುಮತಿಗಿಂತ ಹೆಚ್ಚಿನ ಭಕ್ತರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಇಂತಹ ಭೀಕರ ದುರಂತದಲ್ಲಿ, ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ನಡೆದ ಕಾಲ್ತುಳಿತದಲ್ಲಿ 116 ಭಕ್ತರು ಉಸಿರುಗಟ್ಟಿ ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT