ಸಿಎಂ ಯೋಗಿ ಆದಿತ್ಯನಾಥ್ 
ದೇಶ

ಯುಪಿ ಕಾಲ್ತುಳಿತ: ಎಫ್‌ಐಆರ್‌ನಲ್ಲಿ ಭೋಲೆ ಬಾಬಾ ಹೆಸರಿಲ್ಲ, ಹತ್ರಾಸ್‌ಗೆ ಸಿಎಂ ಯೋಗಿ ಭೇಟಿ

ದುರಂತದಲ್ಲಿ ನೂರಾರು ಭಕ್ತರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಕಾಲ್ತುಳಿತದಿಂದ 122 ಜನ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯ ಸಂಘಟಕರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಸ್ವಯಂ ಘೋಷಿತ ದೇವ ಮಾನವ ಭೋಲೆ ಬಾಬಾ ಹೆಸರನ್ನು ಎಫ್ಐಆರ್ ನಿಂದ ಕೈಬಿಡಲಾಗಿದೆ.

ಹತ್ರಾಸ್ ಪಟ್ಟಣದಿಂದ 47 ಕಿಮೀ ದೂರದಲ್ಲಿರುವ ಫುಲ್ರೈ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದುರಂತದಲ್ಲಿ ನೂರಾರು ಭಕ್ತರು ಗಾಯಗೊಂಡಿದ್ದು, ಗಾಯಾಳುಗಳಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಈ ಮಧ್ಯೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಬೆಳಗ್ಗೆ ಹತ್ರಾಸದ ಫುಲ್ರೈ ಗ್ರಾಮಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದರು. ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದನ್ನು ಖಚಿತಪಡಿಸಿಕೊಂಡರು.

ಸಿಎಂ ಯೋಗಿ ಅದಿತ್ಯನಾಥ್ ಅವರು ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಭೇಟಿ, ಆರೋಗ್ಯ ವಿಚಾರಿಸಿದರು. ಮೂವರು ಸಚಿವರು-ಯುಪಿ ಕ್ಯಾಬಿನೆಟ್ ಸಚಿವ ಚಧುರಿ ಲಕ್ಷ್ಮಿ ನಾರಾಯಣ್, ಯುಪಿ ಎಂಒಎಸ್ ಸಂದೀಪ್ ಸಿಂಗ್ ಮತ್ತು ಅಸಿಮ್ ಅರುಣ್ ಮತ್ತು ಯುಪಿ ಮುಖ್ಯ ಕಾರ್ಯದರ್ಶಿ ಮನೋಜ್ ಸಿಂಗ್ ಮತ್ತು ಯುಪಿ ಡಿಜಿಪಿ ಪ್ರಶಾಂತ್ ಕುಮಾರ್ ಅವರು ಈಗಾಗಲೇ ಹತ್ರಾಸ್‌ನಲ್ಲಿ ಪರಿಸ್ಥಿತಿಯ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಈ ಮಧ್ಯೆ, ಹತ್ರಾಸ್ ಜಿಲ್ಲಾಡಳಿತವು ಪ್ರಮುಖ ಸೇವಾದಾರ್ ದೇವಪ್ರಕಾಶ್ ಮಧುಕರ್ ಸೇರಿದಂತೆ ಸಂಘಟಕರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಆದರೆ, ಎಫ್‌ಐಆರ್‌ನಲ್ಲಿ ದೇವಮಾನವ ಭೋಲೆ ಬಾಬಾ ಹೆಸರಿಲ್ಲ. ರಾಜ್ಯ ಸರ್ಕಾರವು ಪಶ್ಚಿಮ ಮತ್ತು ಮಧ್ಯ ಯುಪಿಯ ಸುಮಾರು 34 ಜಿಲ್ಲೆಗಳನ್ನು ಹೈ ಅಲರ್ಟ್‌ನಲ್ಲಿ ಇರಿಸಿದ್ದರೆ, ಹತ್ರಾಸ್ ಪೊಲೀಸರು ಭೋಲೆ ಬಾಬಾಗಾಗಿ ಶೋಧ ನಡೆಸುತ್ತಿದ್ದಾರೆ. ಅಲ್ಲದೆ ಮಂಗಳವಾರ ರಾತ್ರಿ ಬಾಬಾ ಅವರ ಮೈನ್‌ಪುರಿ ಆಶ್ರಮದ ಮೇಲೆ ದಾಳಿ ನಡೆಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT