ಸೇತುವೆ ಕುಸಿತ 
ದೇಶ

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ, 15 ದಿನಗಳಲ್ಲಿ ಹತ್ತನೇ ಘಟನೆ

15 ವರ್ಷಗಳ ಹಿಂದೆ ನಿರ್ಮಿಸಿದ್ದ ಸೇತುವೆಯೊಂದು ಇಂದು ಬೆಳಗ್ಗೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಪಾಟ್ನಾ: ಬಿಹಾರದಲ್ಲಿ ಗುರುವಾರ ಮತ್ತೊಂದು ಸೇತುವೆ ಕುಸಿದು ಬಿದ್ದಿದ್ದು, ಕೇವಲ ಹದಿನೈದು ದಿನಗಳಲ್ಲಿ ರಾಜ್ಯದಲ್ಲಿ 10 ಸೇತುವೆಗಳು ಕುಸಿದು ಬಿದ್ದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮತ್ತೆರಡು ಸೇತುವೆ ಕುಸಿತಕ್ಕೆ ಸಾಕ್ಷಿಯಾದ ಸರನ್‌ನಿಂದ ವರದಿಯಾದ ಇತ್ತೀಚಿನ ಘಟನೆ ಇದಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಅವರು ಹೇಳಿದ್ದಾರೆ.

15 ವರ್ಷಗಳ ಹಿಂದೆ ನಿರ್ಮಿಸಿದ್ದ ಸೇತುವೆಯೊಂದು ಇಂದು ಬೆಳಗ್ಗೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಬನೇಯಪುರ ಬ್ಲಾಕ್‌ನಲ್ಲಿದ್ದ ಗಂಡಕಿ ನದಿಯ ಮೇಲಿನ ಸಣ್ಣ ಸೇತುವೆ ಇಂದು ಕುಸಿದು ಬಿದ್ದಿದ್ದು, ಈ ಸೇತುವೆ ಸರನ್‌ನ ಹಲವಾರು ಹಳ್ಳಿಗಳನ್ನು ನೆರೆಯ ಸಿವಾನ್ ಜಿಲ್ಲೆಯೊಂದಿಗೆ ಸಂಪರ್ಕಿಸುತ್ತಿತ್ತು.

"ಈ ಸಣ್ಣ ಸೇತುವೆಯನ್ನು 15 ವರ್ಷಗಳ ಹಿಂದೆ ನಿರ್ಮಿಸಲಾಗಿತ್ತು. ನಾನು ಸ್ಥಳಕ್ಕೆ ಹೋಗುತ್ತಿದ್ದೇನೆ. ಈಗಾಗಲೇ ಜಿಲ್ಲಾಡಳಿತದ ಹಲವಾರು ಅಧಿಕಾರಿಗಳು ಅಲ್ಲಿಗೆ ತೆರಳಿದ್ದಾರೆ. ಸೇತುವೆ ಕುಸಿತಕ್ಕೆ ನಿಖರವಾದ ಕಾರಣ ಇನ್ನೂ ಕಂಡುಹಿಡಿಯಲಾಗಿಲ್ಲ. ಆದರೆ ಇತ್ತೀಚೆಗೆ ಹೂಳು ತೆಗೆಯುವ ಕೆಲಸ ಕೈಗೊಳ್ಳಲಾಗಿದೆ" ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಪಿಟಿಐಗೆ ತಿಳಿಸಿದ್ದಾರೆ.

ನಿನ್ನೆ ಸರನ್ ಜಿಲ್ಲೆಯಲ್ಲಿ ಎರಡು ಸಣ್ಣ ಸೇತುವೆಗಳ ಕುಸಿದು ಬಿದ್ದಿದ್ದವು. ಒಂದು ಜಂತಾ ಬಜಾರ್ ಪ್ರದೇಶದಲ್ಲಿ ಮತ್ತು ಇನ್ನೊಂದು ಲಹ್ಲಾದ್‌ಪುರ ಪ್ರದೇಶದಲ್ಲಿ.

ಜಿಲ್ಲೆಯಲ್ಲಿ ಈ ಕಿರು ಸೇತುವೆಗಳು ಕುಸಿದಿರುವುದಕ್ಕೆ ಕಾರಣ ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jamui harassment: ಮೂವರ ಬಂಧನ, 7 ಮಂದಿ ಗುರುತು ಪತ್ತೆ.. ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಪೊಲೀಸ್ ಶೋಧ!

Bihar horror: ಅಪ್ರಾಪ್ತ ಜೋಡಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ; ಆಂಧಭಕ್ತರೇ ಹೊಣೆ - ರಾಹುಲ್ ಗಾಂಧಿ

Human Vs Terminator: 6 ಅಡಿ ರೋಬೋಟ್ ಜೊತೆ ಇನ್‌ಫ್ಲುಯೆನ್ಸರ್ ಫೈಟ್, ಗೆದ್ದಿದ್ಯಾರು? Video ವೈರಲ್

ನೆಲಮಂಗಲ ಬಳಿ ನನ್ನದು, ಮಗನದ್ದು ಹತ್ತತ್ತು ಎಕರೆ ಆಸ್ತಿ ಇದೆ, ರಾಜ್ಯ ಸರ್ಕಾರ ದಿವಾಳಿ ಆಗಿದ್ರೆ ಕೊಡುತ್ತೇನೆ: ಎಚ್​​ಡಿ ರೇವಣ್ಣ ತಿರುಗೇಟು

'ಗೆಳತಿಗೆ 370 ರೂ ಬಿರಿಯಾನಿ' ವಿವಾದ: ಕಮಿಡಿಯನ್ Pranit More ಅರ್ಜಿ, ಕೇಂದ್ರ ಸೇರಿ 3 ಸರ್ಕಾರಗಳಿಗೆ 'ಸುಪ್ರೀಂ' ನೋಟಿಸ್