ಎಲ್‌ಕೆ ಅಡ್ವಾಣಿ 
ದೇಶ

ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು; ಆರೋಗ್ಯ ಸ್ಥಿರ, ವೈದ್ಯರ ನಿಗಾ

ಎಲ್ ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಪ್ರಸ್ತುತ ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ ವಿನಿತ್ ಸೂರಿ ನೇತೃತ್ವದ ವೈದ್ಯರ ತಂಡದ ನಿಗಾದಲ್ಲಿದ್ದಾರೆ ಎಂದು ಅಪೋಲೋ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ನವದೆಹಲಿ: ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಮತ್ತು ಅವರು ಪ್ರಸ್ತುತ ವೈದ್ಯರ ತಂಡದ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಗುರುವಾರ ತಿಳಿಸಿವೆ.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ(ಎಐಐಎಂಎಸ್)ಯಿಂದ ಡಿಸ್ಚಾರ್ಜ್ ಆದ ಕೆಲವು ದಿನಗಳ ನಂತರ ಮತ್ತೆ 96 ವರ್ಷದ ಬಿಜೆಪಿ ನಾಯಕ ಬುಧವಾರ ರಾತ್ರಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

"ಎಲ್ ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ. ಅವರು ಪ್ರಸ್ತುತ ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ ವಿನಿತ್ ಸೂರಿ ನೇತೃತ್ವದ ವೈದ್ಯರ ತಂಡದ ನಿಗಾದಲ್ಲಿದ್ದಾರೆ" ಎಂದು ಅಪೋಲೋ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಅಡ್ವಾಣಿ ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. ಅವರು ತಮ್ಮ ಪುತ್ರಿ ಪ್ರತಿಭಾ ಅಡ್ವಾಣಿ ಅವರೊಂದಿಗೆ ಆಸ್ಪತ್ರೆಗೆ ಬಂದಿದ್ದರು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!