ಜೈರಾಮ್ ರಮೇಶ್ online desk
ದೇಶ

ಹರ್ಯಾಣ, ದೆಹಲಿಯಲ್ಲಿ AAP ಜೊತೆ ಮೈತ್ರಿ ಇಲ್ಲ; ಮಹಾರಾಷ್ಟ್ರ, ಜಾರ್ಖಂಡ್ ನಲ್ಲಿ INDIA ಮೈತ್ರಿ ಸ್ಪರ್ಧೆ: ಜೈರಾಮ್ ರಮೇಶ್

ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದೊಂದಿಗೆ ಕಾಂಗ್ರೆಸ್ ಎದುರಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ನವದೆಹಲಿ: ಹರ್ಯಾಣ, ದೆಹಲಿ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಆಮ್ ಆದ್ಮಿ ಪಕ್ಷದೊಂದಿಗೆ ಮತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿಲ್ಲ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಹೇಳಿದ್ದಾರೆ.

ಆದರೆ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ಗಳಲ್ಲಿ ವಿಧಾನಸಭಾ ಚುನಾವಣೆಯನ್ನು ಇಂಡಿಯಾ ಮೈತ್ರಿಕೂಟದೊಂದಿಗೆ ಕಾಂಗ್ರೆಸ್ ಎದುರಿಸುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಪಿಟಿಐ ಗೆ ಸಂದರ್ಶನ ನೀಡಿರುವ ರಮೇಶ್, ಮುಂಬರುವ ವಿಧಾನಸಭಾ ಚುನಾವಣೆಗಳನ್ನು ಎದುರಿಸುವುದಕ್ಕೆ ಕಾಂಗ್ರೆಸ್ ಏಕ ಮಾತ್ರ ಸೂತ್ರಗಳನ್ನು ಬಳಕೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರು ಮತ್ತು ಇತರ ಮೈತ್ರಿ ಪಾಲುದಾರರು ಒಪ್ಪುವ ರಾಜ್ಯಗಳಲ್ಲಿ ಜೊತೆಯಾಗಿ ಹೋರಾಡುತ್ತದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಪಂಜಾಬ್ ನಲ್ಲಿ INDIA ಮೈತ್ರಿ ಇಲ್ಲ. ಹರ್ಯಾಣದಲ್ಲಿ ನಾವು ಆಮ್ ಆದ್ಮಿ ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ 1 ಸ್ಥಾನ ಬಿಟ್ಟುಕೊಟ್ಟಿದ್ದೆವು. ಆದರೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಿಲ್ಲ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಇನ್ನು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಇರುವುದಿಲ್ಲ ಎಂಬುದನ್ನು ಆಮ್ ಆದ್ಮಿ ಪಕ್ಷವೇ ಸ್ಪಷ್ಟಪಡಿಸಿದೆ ಎಂದು ರಮೇಶ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT