ಅರ್ಚಕರು 
ದೇಶ

ಅಯೋಧ್ಯೆಯ ರಾಮ ಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್; ಕೇಸರಿ ಔಟ್, ಹಳದಿ ಇನ್

ಈ ಮೊದಲು ಅರ್ಚಕರು ಕೇಸರಿ ಕುರ್ತಾ, ಪೇಟ, ಧೋತಿ ಧರಿಸುತ್ತಿದ್ದರು. ಪೇಟವನ್ನು ಅಚ್ಚುಕಟ್ಟಾಗಿ ಧರಿಸಲು ಅವರಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್ ಮೂಲಗಳು ತಿಳಿಸಿವೆ.

ಲಖನೌ: ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಯೋಧ್ಯೆಯ ರಾಮಮಂದಿರದ ಅರ್ಚಕರಿಗೆ ಹೊಸ ಡ್ರೆಸ್ ಕೋಡ್ ಜಾರಿ ಮಾಡಿದ್ದು, ಗರ್ಭಗುಡಿಯಲ್ಲಿ ಭಗವಾನ್ ರಾಮನಿಗೆ ಸೇವೆ ಸಲ್ಲಿಸುತ್ತಿರುವ ಪುರೋಹಿತರು ಇನ್ನು ಮುಂದೆ ಕೇಸರಿ ಬದಲಿಗೆ ಸಾಂಪ್ರದಾಯಿಕ ಹಳದಿ(ಪೀತಾಂಬರಿ) ಬಟ್ಟೆಗಳನ್ನು ಧರಿಸುತ್ತಾರೆ.

ಗಮನಾರ್ಹವೆಂದರೆ, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅರ್ಚಕರಿಗೆ ಹೊಸ ಡ್ರೆಸ್ ಕೋಡ್ ಅನ್ನು ಬಿಡುಗಡೆ ಮಾಡಿದ್ದು, ಅದರ ಪ್ರಕಾರ ಅವರು ಈಗ ಧೋತಿ, ಚೌಬಂದಿ ಮತ್ತು ಪೇಟವನ್ನು ಧರಿಸುತ್ತಾರೆ. ಇವೆಲ್ಲವೂ ಹಳದಿ ಬಣ್ಣದ್ದಾಗಿದೆ.

ಈ ಮೊದಲು ಅರ್ಚಕರು ಕೇಸರಿ ಕುರ್ತಾ, ಪೇಟ, ಧೋತಿ ಧರಿಸುತ್ತಿದ್ದರು. ಪೇಟವನ್ನು ಅಚ್ಚುಕಟ್ಟಾಗಿ ಧರಿಸಲು ಅವರಿಗೆ ಸೂಕ್ತ ತರಬೇತಿ ನೀಡಲಾಗಿದೆ ಎಂದು ದೇವಸ್ಥಾನದ ಟ್ರಸ್ಟ್ ಮೂಲಗಳು ತಿಳಿಸಿವೆ.

ಇದುವರೆಗೆ ಕೆಲವು ಪುರೋಹಿತರು ಮಾತ್ರ ಹಳದಿ ವಸ್ತ್ರವನ್ನು ಧರಿಸುತ್ತಿದ್ದರು. ಆದರೆ ಈಗ ಇಡೀ ಪುರೋಹಿತರ ತಂಡ, ಪೀತಾಂಬರಿಯಲ್ಲಿ ದೇವರ ಸೇವೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದಲ್ಲದೆ, ಅರ್ಚಕರು ಗರ್ಭಗುಡಿಯೊಳಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುವುದನ್ನು ಸಹ ನಿಷೇಧಿಸಲಾಗಿದೆ.

ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಸ್ತುತ 26 ಅರ್ಚಕರು ವಿವಿಧ ಪಾಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ರಚಿಸಿರುವ ಧಾರ್ಮಿಕ ಸಮಿತಿಯು ಹೊಸದಾಗಿ ತರಬೇತಿ ಪಡೆದ 21 ಅರ್ಚಕರನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!