ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ TNIE
ದೇಶ

ಕೇಜ್ರಿವಾಲ್ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ದೆಹಲಿ ಹೈಕೋರ್ಟ್ ಸೂಚನೆ

ಜಾಮೀನು ಕೋರಿ ಕೇಜ್ರಿವಾಲ್ ಅವರು ಸಲ್ಲಿಸುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು, ಜಾಮೀನು ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದಾರೆ.

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಸಿಬಿಐಗೆ ಸೂಚಿಸಿದೆ.

ಜಾಮೀನು ಕೋರಿ ಕೇಜ್ರಿವಾಲ್ ಅವರು ಸಲ್ಲಿಸುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು, ಜಾಮೀನು ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದರು.

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು, ಎಎಪಿ ನಾಯಕ ಕೇಜ್ರಿವಾಲ್ ಫ್ಲೈಟ್ ರಿಸ್ಕ್ ಅಲ್ಲ ಮತ್ತು ಭಯೋತ್ಪಾದಕರೂ ಅಲ್ಲ. ಇಡಿ ದಾಖಲಿಸಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಸಿಬಿಐ ಅವರನ್ನು ಬಂಧಿಸಿದೆ ಎಂದು ಹೇಳಿದರು.

ಇನ್ನು ಸಿಬಿಐ ಪರ ವಾದ ಮಂಡಿಸಿದ ವಕೀಲ ಡಿಪಿ ಸಿಂಗ್, ಕೇಜ್ರಿವಾಲ್ ಅವರು ಮೊದಲು ಜಾಮೀನು ಅರ್ಜಿಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಸಲ್ಲಿಸದೆ ನೇರವಾಗಿ ಹೈಕೋರ್ಟ್‌ಗೆ ಬಂದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರನ್ನು ಸಿಬಿಐ ಜೂನ್ 26 ರಂದು ತಿಹಾರ್ ಜೈಲಿನಿಂದ ಬಂಧಿಸಿತ್ತು. ಮಾರ್ಚ್ 21ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್ ಅವರು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!