ರೋಹಿತ್ ಶರ್ಮಾ ಸನ್ಮಾನಿಸಿದ ಮಹಾರಾಷ್ಟ್ರ ಸಿಎಂ ಶಿಂಧೆ 
ದೇಶ

ಟಿ-20 ವಿಶ್ವಕಪ್ ಗೆಲುವು: ರೋಹಿತ್ ಶರ್ಮಾ ಮತ್ತಿತರ ಆಟಗಾರರನ್ನು ಸನ್ಮಾನಿಸಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ!

ಅಧಿಕೃತ ನಿವಾಸ 'ವರ್ಷಾ ಬಂಗಲೆ'ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ ಸೇರಿದಂತೆ ಇತರ ಆಟಗಾರರಾದ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಸನ್ಮಾನಿಸಿದ್ದಾರೆ.

ಮುಂಬೈ: ಟಿ-20 ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತಿತರರ ಆಟಗಾರರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶುಕ್ರವಾರ ಸನ್ಮಾನಿಸಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸ 'ವರ್ಷಾ ಬಂಗಲೆ'ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಹಿತ್ ಶರ್ಮಾ ಸೇರಿದಂತೆ ಇತರ ಆಟಗಾರರಾದ ಯಶಸ್ವಿ ಜೈಸ್ವಾಲ್, ಶಿವಂ ದುಬೆ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಸನ್ಮಾನಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಶಿಂಧೆ, ಅದ್ಭುತವಾದ ಮ್ಯಾಚ್ ಡಿಫೈನಿಂಗ್ ಕ್ಯಾಚ್‌ಗಾಗಿ ಸೂರ್ಯ ಕುಮಾರ್ ಯಾದವ್ ಅವರನ್ನು ಶ್ಲಾಘಿಸಿದರು. T20 ವಿಶ್ವಕಪ್ ವಿಜೇತ ಕ್ರಿಕೆಟ್ ತಂಡದ ನಾಲ್ವರು ಮುಂಬೈ ಆಟಗಾರರನ್ನು ಮುಂಬೈನ ಮಹಾರಾಷ್ಟ್ರ ವಿಧಾನ ಭವನದ ಸಂಕೀರ್ಣದಲ್ಲಿ ಸನ್ಮಾನಿಸಲಾಗುವುದು ಎಂದು ಅವರು ಹೇಳಿದರು ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮುಂಬೈನಲ್ಲಿ ಗುರುವಾರ ರಾತ್ರಿ ನಡೆದ ಭಾರತೀಯ ಕ್ರಿಕೆಟ್ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭಾರೀ ಜನಸ್ತೋಮ ನೆರೆದಿದ್ದರಿಂದ ಉಂಟಾದ ನೂಕಾಟ, ತಳ್ಳಾಟದಲ್ಲಿ ಗಾಯಗೊಂಡು ಸುಮಾರು 11 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT