ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಿಎಸ್‌ಪಿ ನಾಯಕ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಆಘಾತ ವ್ಯಕ್ತಪಡಿಸಿದ ತಮಿಳುನಾಡು ಸಿಎಂ ಸ್ಟಾಲಿನ್; ಹಂತಕರ ಬಂಧನ

ಆರ್ಮ್‌ಸ್ಟ್ರಾಂಗ್ ಹತ್ಯೆಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ತಿಳಿಸಿದ್ದಾರೆ.

ಸಿಎಂ ಎಂಕೆ ಸ್ಟಾಲಿನ್
Lingaraj Badiger
Updated On : 6 Jul 2024, 12:03 pm

ಚೆನ್ನೈ: ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ತಮಿಳುನಾಡು ಅಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಶನಿವಾರ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮಧ್ಯರಾತ್ರಿಯ ಕಾರ್ಯಾಚರಣೆಯಲ್ಲಿ ಹಂತಕರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಆರ್ಮ್‌ಸ್ಟ್ರಾಂಗ್ ಹತ್ಯೆಯಿಂದ ತೀವ್ರ ಆಘಾತ ಮತ್ತು ದುಃಖವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ತಿಳಿಸಿದ್ದಾರೆ.

52 ವರ್ಷದ ಬಿಎಸ್‌ಪಿ ನಾಯಕನನ್ನು ಶುಕ್ರವಾರ ರಾತ್ರಿ ಪೆರಂಬೂರ್‌ನಲ್ಲಿರುವ ಅವರ ಮನೆಯ ಸಮೀಪ ಬೈಕ್‌ನಲ್ಲಿ ಬಂದ ಆರು ಮಂದಿಯ ಗ್ಯಾಂಗ್ ಭೀಕರವಾಗಿ ಹತ್ಯೆ ಮಾಡಿದೆ. ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಹತ್ಯೆಯಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದಾರೆ" ಎಂದು ಸ್ಟಾಲಿನ್ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.

Advertisement

Advertisement

Also Read

ತಮಿಳುನಾಡು BSP ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆ!

ತನಿಖೆಯನ್ನು ತ್ವರಿತವಾಗಿ ನಡೆಸಿ ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ನೋಡಿಕೊಳ್ಳಲು ಪೊಲೀಸರಿಗೆ ಆದೇಶಿಸಿದ್ದೇನೆ. ದುಃಖತಪ್ತ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪ ಮತ್ತು ಸಹಾನುಭೂತಿ ತಿಳಿಸಲು ನಾನು ಬಯಸುತ್ತೇನೆ ಎಂದು ತಮಿಳುನಾಡು ಸಿಎಂ ಹೇಳಿದ್ದಾರೆ.

ಬಿಎಸ್‌ಪಿ ರಾಜ್ಯಾಧ್ಯಕ್ಷರ ಹತ್ಯೆಗೆ ಸಂಬಂಧಿಸಿದಂತೆ ಕನಿಷ್ಠ ಎಂಟು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣವನ್ನು ಭೇದಿಸಲು ಪೊಲೀಸರ 10 ತಂಡಗಳನ್ನು ರಚಿಸಲಾಗಿದೆ ಎಂದು ಹೆಚ್ಚುವರಿ ಆಯುಕ್ತ(ಉತ್ತರ) ಆಸ್ರಾ ಗರ್ಗ್ ಶುಕ್ರವಾರ ತಡರಾತ್ರಿ ಸುದ್ದಿಗಾರರಿಗೆ ತಿಳಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments