ಆಂಧ್ರ ಸಿಎಂ ಚಂದ್ರಬಾಬು ನಾಯ್ಡು- ತೆಲಂಗಾಣ ಸಿಎಂ ರೇವಂತ್ ರೆಡ್ಡಿ online desk
ದೇಶ

ತೆಲಂಗಾಣ- ಆಂಧ್ರ ಸಿಎಂ ಗಳ ಭೇಟಿ; ವಿಭಜನೆಯ ನಂತರದ ಸಮಸ್ಯೆ ಬಗೆಹರಿಸುವ ಬಗ್ಗೆ ಚರ್ಚೆ

ಚಂದ್ರಬಾಬು ನಾಯ್ಡು- ರೇವಂತ್ ರೆಡ್ಡಿ ನೇತೃತ್ವದಲ್ಲಿ ಉಭಯ ರಾಜ್ಯಗಳ ನಿಯೋಗಗಳು ಮತ್ತು ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕಳೆದ 10 ವರ್ಷಗಳಿಂದ ಬಾಕಿ ಉಳಿದಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ.

ಹೈದರಾಬಾದ್: ತೆಲಂಗಾಣ- ಆಂಧ್ರಪ್ರದೇಶ ಮುಖ್ಯಮಂತ್ರಿಗಳು 4 ವರ್ಷಗಳಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದು, ರಾಜ್ಯ ವಿಭಜನೆಯ ನಂತರದ ವಿಷಯಗಳನ್ನು ಬಗೆಹರಿಸಿಕೊಳ್ಳುವುದರ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ.

ರಾಜ್ಯಗಳ ನಡುವಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿ ರಚನೆಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ.

ಮಹಾತ್ಮಾ ಜ್ಯೋತಿರಾವ್ ಫುಲೆ ಪ್ರಜಾ ಭವನದಲ್ಲಿ ಚಂದ್ರಬಾಬು ನಾಯ್ಡು- ರೇವಂತ್ ರೆಡ್ಡಿ ನೇತೃತ್ವದಲ್ಲಿ ಉಭಯ ರಾಜ್ಯಗಳ ನಿಯೋಗಗಳು ಮತ್ತು ಸಚಿವರು ಮತ್ತು ಹಿರಿಯ ಅಧಿಕಾರಿಗಳನ್ನು ಒಳಗೊಂಡ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಕಳೆದ 10 ವರ್ಷಗಳಿಂದ ಬಾಕಿ ಉಳಿದಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಗಿದೆ.

ಅಧಿಕಾರಿಗಳ ಸಮಿತಿಯಿಂದ ಪರಿಹರಿಸಲಾಗದ ಸಮಸ್ಯೆಗಳನ್ನು ಸಚಿವರ ಸಮಿತಿಗೆ ಕಳುಹಿಸಲಾಗುವುದು. ಸಚಿವರ ಸಮಿತಿಯೂ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾದರೆ ಮತ್ತೊಮ್ಮೆ ಮುಖ್ಯಮಂತ್ರಿಗಳ ಸಭೆ ನಡೆಸಿ ಬಗೆಹರಿಸಲಾಗುವುದು ಎಂದು ತೆಲಂಗಾಣ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ