ಶ್ರೀನಗರ: ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ಫ್ರಿಸಲ್ ಚಿಂಗಮ್ ಹಾಗೂ ಮೊಡೆರ್ಗ್ಗೆ ಪ್ರದೇಶಗಳಲ್ಲಿ ಪ್ರತ್ಯೇಕ ಎನ್ ಕೌಂಟರ್ ನಡೆದಿದ್ದು, ಉಗ್ರರೊಂದಿಗಿನ ಕದನದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಂದರ್ಭದಲ್ಲಿ ಭಯೋತ್ಪಾದಕರ ವಿರುದ್ಧ ಎನ್ ಕೌಂಟರ್ ನಡೆಯಿತು ಎಂದು ಸೇನಾ ಅಧಿಕಾರಿಗಳು ಹೇಳಿದರು.
ಇಲ್ಲಿಯವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ, ಅವರ ದೇಹಗಳು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್‌ಕೌಂಟರ್ ಪ್ರದೇಶದ ಡ್ರೋನ್ ದೃಶ್ಯಗಳಲ್ಲಿ ನಾಲ್ಕು ಶವಗಳು ಬಿದ್ದಿರುವುದನ್ನು ತೋರಿಸಿದೆ. ಆದರೆ ಇನ್ನೂ ಗುಂಡಿನ ದಾಳಿ ನಡೆಯುತ್ತಿರುವುದರಿಂದ ಶವಗಳನ್ನು ಇನ್ನೂ ಹಿಂಪಡೆಯಲು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್‌ಕೌಂಟರ್ ಸ್ಥಳಕ್ಕೆ ಭೇಟಿ ನೀಡಿದ ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿ ಕೆ ಬಿರ್ಧಿ ಅವರು ಕಾರ್ಯಾಚರಣೆಯನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.