ಪುರಿ ಜಗನ್ನಾಥ ರಥೋತ್ಸವ online desk
ದೇಶ

ಪುರಿ ರಥ ಯಾತ್ರೆ: ಲಕ್ಷಾಂತರ ಮಂದಿ ನಡುವೆ ಉಸಿರುಗಟ್ಟಿ ವ್ಯಕ್ತಿ ಸಾವು!

ಸಾವನ್ನಪ್ಪಿದ ಭಕ್ತ ಉಸಿರುಗಟ್ಟಿದ ವಾತಾವರಣದಿಂದ ಮೃತಪಟ್ಟಿದ್ದಾನೆ, ಆದರೆ ಲಕ್ಷಾಂತರ ಮಂದಿ ಸೇರಿದ್ದರೂ ಕಾಲ್ತುಳಿತದಂತಯ ಯಾವುದೇ ಅನಾಹುತಗಳೂ ಸಂಭವಿಸಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.

ಪುರಿ: ಲಕ್ಷಾಂತರ ಮಂದಿ ಸೇರಿದ್ದ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಓರ್ವ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿದ್ದರೆ ಹಲವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪುರಿ ಜಗನ್ನಾಥ ರಥ ಯಾತ್ರೆ ದೇಶದಲ್ಲಿ ಅತಿ ಹೆಚ್ಚು ಜನಸಂಖ್ಯೆ ಒಂದೆಡೆ ಸೇರುವ ದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿದೆ. 1971 ರಲ್ಲಿ ಹೊರತುಪಡಿಸಿ ಇದೇ ಮೊದಲ ಬಾರಿಗೆ 2 ದಿನಗಳ ಕಾಲ ರಥ ಯಾತ್ರೆ ನಡೆಯುತ್ತಿದ್ದು, ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪುರಿ ಜಗನ್ನಾಥ ರಥಯಾತ್ರೆ ಕಣ್ತುಂಬಿಕೊಳ್ಳುವುದಕ್ಕೆ ಪುರಿ ಕ್ಷೇತ್ರದಲ್ಲಿ ನೆರೆದಿದ್ದಾರೆ.

ಸಾವನ್ನಪ್ಪಿದ ಭಕ್ತ ಉಸಿರುಗಟ್ಟಿದ ವಾತಾವರಣದಿಂದ ಮೃತಪಟ್ಟಿದ್ದಾನೆ, ಆದರೆ ಲಕ್ಷಾಂತರ ಮಂದಿ ಸೇರಿದ್ದರೂ ಕಾಲ್ತುಳಿತದಂತಯ ಯಾವುದೇ ಅನಾಹುತಗಳೂ ಸಂಭವಿಸಿಲ್ಲ ಎಂದು ಜಿಲ್ಲಾಡಳಿತ ಹೇಳಿದೆ.

ವಿಪರೀತ ಉಷ್ಣತೆ ಮತ್ತು ತೇವಾಂಶದಿಂದ ವ್ಯಕ್ತಿಯ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂತಹ ಅನಿರೀಕ್ಷಿತ ಸಂದರ್ಭಗಳನ್ನು ನಿಭಾಯಿಸುವುದಕ್ಕಾಗಿ ಸಾಕಷ್ಟು ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಆಂಬ್ಯುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್