ಘಟನೆಯ ದೃಶ್ಯ PTI
ದೇಶ

ತಡರಾತ್ರಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, ವಿಡಿಯೋ

ಎರಡು ಗುಂಪುಗಳ ನಡುವಿನ ಹಳೆ ವೈಷಮ್ಯದಿಂದ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗುರುದಾಸ್‌ಪುರ: ಎರಡು ಗುಂಪುಗಳ ನಡುವಿನ ಹಳೆ ವೈಷಮ್ಯದಿಂದ ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಟಾಲದ ವಿತ್ವಾನ್ ಗ್ರಾಮದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು ಎರಡೂ ಗುಂಪಿನಲ್ಲಿ ಒಟ್ಟು 13 ಜನರಿದ್ದರು. 60 ಬಾರಿ ಗುಂಡಿನ ದಾಳಿ ನಡೆದಿದ್ದು ಆ ಪೈಕಿ ನಾಲ್ವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಎರಡೂ ಗುಂಪಿನ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದರು. ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!

ಶ್ರೀಲಂಕಾ ವಿರುದ್ಧ 165 ರನ್ ಗಳಿಂದ ಗೆಲುವು: WTC ಪಾಯಿಂಟ್ ಪಟ್ಟಿಯಲ್ಲಿ ಭಾರತದ ಸ್ಥಾನ ಬದಲಾವಣೆ ಆಯ್ತಾ?

ಸಿಎಂ ವಿಜಯ್ ಯು- ಟರ್ನ್: ಮತ್ತೊಂದು ಮಹತ್ವದ ಆದೇಶ ಹಿಂಪಡೆದ ತಮಿಳುನಾಡು ಸರ್ಕಾರ!