ಸಾಂದರ್ಭಿಕ ಚಿತ್ರ 
ದೇಶ

ಒಡಿಶಾ: ಪುರಿ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು; ಇಬ್ಬರು ಸಾವು, ಸುಮಾರು 130 ಜನರಿಗೆ ಗಾಯ

ಭಾನುವಾರ ರಥಯಾತ್ರೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಂತಹ ಪರಿಸ್ಥಿತಿಯಲ್ಲಿ ಬೋಲಂಗಿರ್ ಜಿಲ್ಲೆಯ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಒಡಿಶಾ: ಪುರಿ ಜಗನ್ನಾಥ ರಥಯಾತ್ರೆಯ ಸಂದರ್ಭದಲ್ಲಿ ವೇಳೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು,130 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಭಾನುವಾರ ರಥಯಾತ್ರೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಂತಹ ಪರಿಸ್ಥಿತಿಯಲ್ಲಿ ಬೋಲಂಗಿರ್ ಜಿಲ್ಲೆಯ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಥವನ್ನು ಎಳೆಯುವಾಗ ಮೂರ್ಛೆ ಹೋಗಿದ್ದ ಆತನನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಸಿಪಿಆರ್ ಮಾಡಲಾಯಿತು. ಆದರೂ ಅಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಸೇಂಟ್ ಜಾನ್ ಆಂಬ್ಯುಲೆನ್ಸ್ ಸೇವೆಯ ಸಹಾಯಕ ಕಮಾಂಡೆಂಟ್ ಸುಶಾಂತ್ ಕುಮಾರ್ ಪಟ್ನಾಯಕ್ ಹೇಳಿದರು.

ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡ ಭಕ್ತರಿಗೆ ಉತ್ತಮ ವೈದ್ಯಕೀಯ ಸೇವೆಯನ್ನು ಒದಗಿಸುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮತ್ತೊಂದು ಘಟನೆಯಲ್ಲಿ, ಭಾನುವಾರ ಝಾರ್ಸುಗುಡಾ ಜಿಲ್ಲೆಯಲ್ಲಿ ರಥಯಾತ್ರೆಯ ವೇಳೆ ರಥದ ಚಕ್ರಗಳ ಅಡಿಯಲ್ಲಿ ಭಕ್ತರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಶ್ಯಾಮ್ ಸುಂದರ್ ಕಿಶನ್ ಎಂದು ಗುರುತಿಸಲಾಗಿದೆ. ರಥ ಎಳೆಯುವಾಗ ಆಕಸ್ಮಿಕ ಕೆಳಗೆ ಬಿದ್ದ ಅವರ ಮೇಲೆ ರಥದ ಚಕ್ರಗಳು ಹರಿದಿವೆ. ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT