ಅಪಘಾತದಲ್ಲಿ ನಜ್ಜು ಗುಜ್ಜಾಗಿರುವ ಬಸ್ 
ದೇಶ

ಉತ್ತರ ಪ್ರದೇಶ: ಹಾಲಿನ ಟ್ಯಾಂಕರ್ ಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ; ಸ್ಥಳದಲ್ಲೇ 18 ಮಂದಿ ದುರ್ಮರಣ, 20 ಜನರಿಗೆ ಗಾಯ

ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿದ್ದ ಬಸ್ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಲಕ್ನೋ: ಹಾಲಿನ ಟ್ಯಾಂಕರ್ ಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಸಾವನ್ನಪ್ಪಿ 20 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೊದ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಮುಂಜಾನೆ ನಡೆದಿದೆ.

ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಬಿಹಾರದ ಶಿವಗಢದಿಂದ ದೆಹಲಿಗೆ ಹೋಗುತ್ತಿದ್ದ ಬಸ್ ಬೆಹ್ತಾ ಮುಜಾವರ್ ಪೊಲೀಸ್ ಠಾಣೆ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್ ಮತ್ತು ಟ್ಯಾಂಕರ್ ಹಾರಿ ಹೋಗಿವೆ. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದಾರೆ. ಅದೇ ವೇಳೆ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಆಗಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ. ಸಿಒ ಬಂಗಾರ್ಮೌ ಅರವಿಂದ್ ಚೌರಾಸಿಯಾ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಸ್ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ. ಅಪಘಾತದ ಮಾಹಿತಿ ಪಡೆದ ಡಿಎಂ ಮತ್ತು ಎಸ್ಪಿ ಕೂಡ ಸ್ಥಳಕ್ಕೆ ಆಗಮಿಸಿದರು.

ಬೆಹ್ತಾ ಮುಜಾವರ್ ಪ್ರದೇಶದ ಅಡಿಯಲ್ಲಿ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇ ಕಿಮೀ ಸಂಖ್ಯೆ 247 ರಲ್ಲಿ ಬೆಳಿಗ್ಗೆ 05.15 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಿಹಾರದಿಂದ ದೆಹಲಿಗೆ ಹೋಗುತ್ತಿದ್ದ ಡಬಲ್ ಡೆಕ್ಕರ್ ಬಸ್ ಸಂಖ್ಯೆ UP95 T 4720, ಹಾಲಿನ ಟ್ಯಾಂಕರ್ ಸಂಖ್ಯೆ UP70 CT 3999 ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 18 ಜನರು ಸಾವನ್ನಪ್ಪಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. "ದುಃಖದಲ್ಲಿರುವ ಕುಟುಂಬಗಳಿಗೆ ನನ್ನ ಸಂತಾಪವಿದೆ. ಸ್ಥಳದಲ್ಲಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸಲು ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ" ಎಂದು ತಿಳಿಸಿದ್ದಾರೆ. ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT