ಆರೋಪಿ ಮಿಹಿರ್ ಶಾ ಬಂಧನ TNIE
ದೇಶ

BMW ಹಿಟ್ ಅಂಡ್ ರನ್ ಪ್ರಕರಣ: ಮೃತ ಮಹಿಳೆ ಕುಟುಂಬಕ್ಕೆ ಮಹಾರಾಷ್ಟ್ರ ಸಿಎಂ 10 ಲಕ್ಷ ರೂ ನೆರವು ಘೋಷಣೆ

ಅಪಘಾತ ಪ್ರಕರಣದ ಪ್ರಮುಖ ಆರೋಪಿ ತಮ್ಮ ಪಕ್ಷದ ನಾಯಕನ ಮಗ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮಹಾ ಸಿಎಂ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮತ್ತು ಯಾರನ್ನೂ ಬಿಡುವುದಿಲ್ಲ ಎಂದರು.

ಮುಂಬೈ: BMW ಹಿಟ್ ಅಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬುಧವಾರ ಭರವಸೆ ನೀಡಿದ್ದಾರೆ ಮತ್ತು ಮೃತ ಮಹಿಳೆಯ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಘೋಷಿಸಿದ್ದಾರೆ.

ಅಪಘಾತ ಪ್ರಕರಣದ ಪ್ರಮುಖ ಆರೋಪಿ ತಮ್ಮ ಪಕ್ಷದ ನಾಯಕನ ಮಗ ಎಂಬ ಟೀಕೆಗಳಿಗೆ ಪ್ರತಿಕ್ರಿಯಿಸಿದ ಮಹಾ ಸಿಎಂ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮತ್ತು ಯಾರನ್ನೂ ಬಿಡುವುದಿಲ್ಲ ಎಂದರು.

"ತಪ್ಪಿತಸ್ಥರು ಯಾರೇ ಆಗಿರಲಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು". ಸಂತ್ರಸ್ತೆ ಕುಟುಂಬಕ್ಕೆ ನಾವು ಬೆಂಬಲ ನೀಡುತ್ತೇವೆ, ನೊಂದ ಕುಟುಂಬಕ್ಕೆ ಕಾನೂನು ಮತ್ತು ಆರ್ಥಿಕ ನೆರವು ನೀಡುತ್ತೇವೆ. ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ನೆರವು ನೀಡುತ್ತೇವೆ. ಅವರು ಸಹ ನಮ್ಮ ಕುಟುಂಬದವರು ಎಂದು ಶಿಂಧೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಪಘಾತ ಪ್ರಕರಣದ ಪ್ರಮುಖ ಆರೋಪಿ, ಆಡಳಿತಾರೂಢ ಶಿವಸೇನೆ ನಾಯಕ ರಾಜೇಶ್ ಶಾ ಅವರ ಪುತ್ರ 24 ವರ್ಷದ ಮಿಹಿರ್ ಶಾ ಚಲಾಯಿಸುತ್ತಿದ್ದ ಕಾರು ಭಾನುವಾರ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 45 ವರ್ಷದ ಮಹಿಳೆ ಸಾವಿಗೀಡಾಗಿದ್ದರು. ನಂತರ ಮಿಹಿರ್ ಶಾ ತಲೆಮರೆಸಿಕೊಂಡಿದ್ದರು. ಆದರೆ ಮೂರು ದಿನಗಳ ನಂತರ ಅವರನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!