ಇಲ್ತಿಜಾ ಮುಫ್ತಿ  
ದೇಶ

ನನ್ನ ಫೋನ್ ಹ್ಯಾಕ್ ಮಾಡಲಾಗಿದೆ, ಮಹಿಳಾ ನಾಯಕರ ಮೇಲೆ ಬಿಜೆಪಿ ಕಣ್ಣು: ಇಲ್ತಿಜಾ ಮುಫ್ತಿ ಆರೋಪ

"ನನ್ನ ಫೋನ್ ಅನ್ನು ಪೆಗಾಸಸ್ ಹ್ಯಾಕ್ ಮಾಡಿದೆ ಎಂದು ಆಪಲ್ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರ ತನ್ನನ್ನು ಟೀಕಿಸುವವರ ವಿರುದ್ಧ ಮತ್ತು ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು ಇದನ್ನು ಬಳಸುತ್ತಿದೆ".

ಶ್ರೀನಗರ: ಪಿಡಿಪಿ ಅಧ್ಯಕ್ಷೆ, ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಮಗಳು ಹಾಗೂ ಅವರ ಮಾಧ್ಯಮ ಸಲಹೆಗಾರ್ತಿ ಇಲ್ತಿಜಾ ಮುಫ್ತಿ ಅವರು ತಮ್ಮ ಫೋನ್ ಅನ್ನು ಪೆಗಾಸಸ್ ಸ್ಪೈವೇರ್ ಹ್ಯಾಕ್ ಮಾಡಿದೆ ಎಂದು ಬುಧವಾರ ಆರೋಪಿಸಿದ್ದಾರೆ.

"ನನ್ನ ಫೋನ್ ಅನ್ನು ಪೆಗಾಸಸ್ ಹ್ಯಾಕ್ ಮಾಡಿದೆ ಎಂದು ಆಪಲ್ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರ ತನ್ನನ್ನು ಟೀಕಿಸುವವರ ವಿರುದ್ಧ ಮತ್ತು ರಾಜಕೀಯ ವಿರೋಧಿಗಳಿಗೆ ಕಿರುಕುಳ ನೀಡಲು ಇದನ್ನು ಬಳಸುತ್ತಿದೆ" ಎಂದು ಇಲ್ತಿಜಾ ಮುಫ್ತಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಭಾರತೀಯ ಜನತಾ ಪಕ್ಷವು(ಬಿಜೆಪಿ) "ತಮಗೆ ಮಣಿಯದ" ಮಹಿಳಾ ನಾಯಕರ ಮೇಲೆ ಸ್ನೂಪ್ ಮಾಡುತ್ತಿದೆ ಎಂದು ಆರೋಪಿಸಿದ ಇಲ್ತಿಜಾ, "ಬಿಜೆಪಿ ನಾಚಿಕೆಯಿಲ್ಲದೆ ಮಹಿಳೆಯರ ಮೇಲೆ ಸ್ನೂಪ್ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇಸ್ರೇಲ್ ಮೂಲದ ಸೈಬರ್ ಸೆಕ್ಯುರಿಟಿ ಕಂಪನಿ NSO ಗ್ರೂಪ್ ಅಭಿವೃದ್ಧಿಪಡಿಸಿದ ಪೆಗಾಸ್ ಸ್ಪೈವೇರ್ WhatsApp ನಲ್ಲಿ ಮಿಸ್ ಕಾಲ್ ಕೊಡುವ ಮೂಲಕ ಮೊಬೈಲ್ ಫೋನ್‌ಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT