ಪ್ರಪಾತಕ್ಕೆ ಉರುಳಿದ ಬಸ್ 
ದೇಶ

ಪ್ರಪಾತಕ್ಕೆ ಉರುಳಿದ ಪ್ರವಾಸಿಗರ ಬಸ್: ಭೀಕರ Video ಕ್ಯಾಮೆರಾದಲ್ಲಿ ಸೆರೆ

ಭಾನುವಾರ ಗುಜರಾತ್ ನಲ್ಲಿ ಸಂಭವಿಸಿದ್ದ ಭೀಕರ ಬಸ್ ಅಪಘಾತದ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದ್ದು, ಪ್ರವಾಸಿಗರ ಹೊತ್ತಿದ್ದ ಬಸ್ ಪ್ರಪಾತಕ್ಕೆ ಉರುಳುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಗಾಂಧಿನಗರ: ಭಾನುವಾರ ಗುಜರಾತ್ ನಲ್ಲಿ ಸಂಭವಿಸಿದ್ದ ಭೀಕರ ಬಸ್ ಅಪಘಾತದ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದ್ದು, ಪ್ರವಾಸಿಗರ ಹೊತ್ತಿದ್ದ ಬಸ್ ಪ್ರಪಾತಕ್ಕೆ ಉರುಳುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಹೌದು.. ಸುಮಾರು 70 ಮಂದಿ ಪ್ರಯಾಣಿಕರನ್ನು (Passengers) ಹೊತ್ತೊಯ್ಯುತ್ತಿದ್ದ ಬಸ್ (Bus) ಕಣಿವೆಗೆ ಉರುಳಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿರುವ ಘಟನೆ ಭಾನುವಾರ ಗುಜರಾತ್‌ನ (Gujarat) ಸಪುತಾರಾದಲ್ಲಿ (Saputara) ನಡೆದಿತ್ತು.

ಐಷಾರಾಮಿ ಬಸ್‌ನಲ್ಲಿ ಸುಮಾರು 70 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತದ ಬಗ್ಗೆ ಮಾಹಿತಿ ಪಡೆದ ಸಪೂತರಾ ಪೊಲೀಸರು ಹಾಗೂ 108 ತಂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ.

ಭಾನುವಾರ ಬೆಳಗ್ಗೆ ಸೂರತ್ ಚೌಕ್ ಮಾರ್ಕೆಟ್‌ನಿಂದ ಸಪುತಾರಾಗೆ ಪ್ರವಾಸಿಗರನ್ನು ಹೊತ್ತ ಬಸ್ಸು ಸೂರತ್ ಕಡೆಗೆ ಹಿಂತಿರುಗುತ್ತಿತ್ತು. ಮಾರ್ಗಮಧ್ಯದಲ್ಲಿ ಓವರ್‌ಟೇಕ್ ಮಾಡುವಾಗ ಎದುರಿನಿಂದ ಬರುತ್ತಿದ್ದ ಟೆಂಪೋವನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದು ಬಸ್ ಕಣಿವೆಗೆ ಬಿದ್ದಿದೆ.ಪ್ರವಾಸಿಗರು ಸಪುತಾರಾಕ್ಕೆ ಭೇಟಿ ನೀಡಿ ಸೂರತ್‌ಗೆ ಹಿಂತಿರುಗುತ್ತಿದ್ದರು. ಸಪುತಾರಾ-ಮಲೆಗಾಂ ರಾಷ್ಟ್ರೀಯ ಹೆದ್ದಾರಿ ಘಾಟ್‌ನಲ್ಲಿ ಘಟನೆ ನಡೆದಿದೆ.

ಪ್ರಯಾಣಿಕರ ಮೊಬೈಲ್ ನಲ್ಲಿ ಭೀಕರ ದೃಶ್ಯ ಸೆರೆ

ಇನ್ನು ಬಸ್ ಕಣಿವೆಗೆ ಉರುಳು ಮುನ್ನ ಬಸ್ ನಲ್ಲಿದ್ದ ಪ್ರಯಾಣಿಕರೊಬ್ಬರು ಅಲ್ಲಿನ ಪ್ರಕೃತಿ ಸೌಂದರ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದರು. ಹೀಗೆ ಮೊಬೈಲ್ ವಿಡಿಯೋ ರೆಕಾರ್ಡಿಂಗ್ ಚಾಲನೆಯಲ್ಲಿರುವಾಗಲೇ ಬಸ್ ಪ್ರಪಾತಕ್ಕೆ ಉರುಳಿದೆ. ಅಪಘಾತದ ಅಂತಿಮ ಕ್ಷಣಗಳು ಮೊಬೈಲ್ ನಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ