ಸಾಂದರ್ಭಿಕ ಚಿತ್ರ 
ದೇಶ

NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಕಿಂಗ್‌ಪಿನ್ ರಾಕಿ ಅಲಿಯಾಸ್ ರಾಕೇಶ್ ರಂಜನ್‌ ಬಂಧನ

ನಳಂದ ಮೂಲದ ರಾಕಿ ಅಲಿಯಾಸ್ ರಾಕೇಶ್ ರಂಜನ್, ಪ್ರಕರಣದ ಮಾಸ್ಟರ್ ಮೈಂಡ್ ಸಂಜೀವ್ ಮುಖಿಯಾ ಅವರ ಸಂಬಂಧಿ ಎಂದು ಹೇಳಲಾಗಿದ್ದು, ಪಾಟ್ನಾದ ಹೊರವಲಯದಲ್ಲಿ ಸಿಬಿಐ ಬಂಧಿಸಿದೆ.

ನವದೆಹಲಿ: NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ತಲೆಮರೆಸಿಕೊಂಡಿದ್ದ ಕಿಂಗ್‌ಪಿನ್ ರಾಕಿ ಅಲಿಯಾಸ್ ರಾಕೇಶ್ ರಂಜನ್‌ನನ್ನು ಸಿಬಿಐ ಗುರುವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಳಂದ ಮೂಲದ ರಾಕಿ ಅಲಿಯಾಸ್ ರಾಕೇಶ್ ರಂಜನ್, ಪ್ರಕರಣದ ಮಾಸ್ಟರ್ ಮೈಂಡ್ ಸಂಜೀವ್ ಮುಖಿಯಾ ಅವರ ಸಂಬಂಧಿ ಎಂದು ಹೇಳಲಾಗಿದ್ದು, ಪಾಟ್ನಾದ ಹೊರವಲಯದಲ್ಲಿ ಸಿಬಿಐ ಬಂಧಿಸಿದೆ ಎಂದು ಅವರು ಹೇಳಿದ್ದಾರೆ.

ಪೇಪರ್ ಸೋರಿಕೆ ಪ್ರಕರಣ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿದ್ದ ರಾಕೇಶ್ ರಂಜನ್ ಗಾಗಿ ಸಿಬಿಐ ತೀವ್ರ ಶೋಧ ನಡೆಸಿತ್ತು. ಅಂತಿಮವಾಗಿ ಇಂದು ಬೆಳಗ್ಗೆ ಸಿಬಿಐ ಕಿಂಗ್ ಪಿನ್ ರಾಕಿಯನ್ನು ಬಂಧಿಸಿದೆ ಎಂದು ಅವರು ತಿಳಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಾಟ್ನಾದ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್ ರಾಕೇಶ್ ರಂಜನ್ ನನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ.

ರಾಕೇಶ್ ರಂಜನ್ ಬಂಧನದ ನಂತರ ಸಿಬಿಐ ಪಾಟ್ನಾ ಮತ್ತು ಹತ್ತಿರದ ಪ್ರದೇಶಗಳಲ್ಲಿ ಮೂರು ಕಡೆ ಮತ್ತು ಕೋಲ್ಕತ್ತಾದ ಒಂದು ಸ್ಥಳಗಳಲ್ಲಿ ತೀವ್ರ ಶೋಧ ನಡೆಸಿತು ಎಂದು ಅವರು ತಿಳಿಸಿದ್ದಾರೆ.

ಈ ಮುಂಚೆ ಸಿಬಿಐ, ಪ್ರಕರಣದಲ್ಲಿ ಜಾರ್ಖಂಡ್‌ನ ಹಜಾರಿಬಾಗ್ ಮೂಲದ ಓಯಸಿಸ್ ಶಾಲೆಯ ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲರನ್ನು ಬಂಧಿಸಿತ್ತು ಮತ್ತು ಸುಟ್ಟ ಪ್ರಶ್ನೆಪತ್ರಿಕೆಗಳನ್ನು ಬಿಹಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ