ನವದೆಹಲಿ: ನೀಟ್-ಯುಜಿ 2024ರ ವೈದ್ಯಕೀಯ ಪ್ರವೇಶ ಪರೀಕ್ಷೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 18ರಂದು ಕೈಗೆತ್ತಿಕೊಳ್ಳಲಿದೆ.
ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA), ಜುಲೈ 8ರಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿಗೆ ಸಂಬಂಧಪಟ್ಟಂತೆ ಅಫಿಡವಿಟ್ಟು ಸಲ್ಲಿಸಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.
ಕೇಂದ್ರ ಸರ್ಕಾರ ಮತ್ತು ಎನ್ ಟಿಎ ಸಲ್ಲಿಸಿರುವ ಅಫಿಡವಿಟ್ಟನ್ನು ಪಡೆದಿಲ್ಲ ಎಂದು ಕೆಲವು ಅರ್ಜಿದಾರರ ಪರವಾಗಿ ವಿಚಾರಣೆಗೆ ಹಾಜರಾಗುತ್ತಿರುವ ವಕೀಲರು ಹೇಳಿದ್ದಾರೆಂದು ನ್ಯಾಯಮೂರ್ತಿಗಳಾದ ಜೆ ಬಿ ಪರ್ಡಿವಾಲಾ ಮತ್ತು ಮನೋಜ್ ಮಿಶ್ರ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.