ಕಂಗನಾ ರಣಾವತ್ 
ದೇಶ

ನನ್ನ ಭೇಟಿಗೆ ಬರುವವರು ಆಧಾರ್ ಕಾರ್ಡ್ ತರುವುದು ಕಡ್ಡಾಯ: ಸಂಸದೆ ಕಂಗನಾ ರಣಾವತ್‌ ಹೇಳಿಕೆಗೆ ಆಕ್ರೋಶ

ಬಾಲಿವುಟ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ‘ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್‌ಗಳನ್ನು ತರಬೇಕು’ ಎಂದು ಹೇಳಿದ್ದಾರೆ.

ನವದೆಹಲಿ: ಬಾಲಿವುಟ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು, ‘ತಾವು ಪ್ರತಿನಿಧಿಸುವ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಜನರು ತಮ್ಮನ್ನು ಭೇಟಿ ಮಾಡಲು ಬಯಸಿದರೆ, ತಮ್ಮ ಆಧಾರ್ ಕಾರ್ಡ್‌ಗಳನ್ನು ತರಬೇಕು’ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಕಂಗನಾ ಮತ್ತು ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ.

ದೊಡ್ಡ ಸಂಖ್ಯೆಯ ಪ್ರವಾಸಿಗಳು ಮತ್ತು ಹೊರಗಿನವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಈ ನಿಯಮವನ್ನು ಜಾರಿಗೊಳಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಮಂಡಿಯಲ್ಲಿ ಇರುವಾಗಲೆಲ್ಲ ನಿಯೋಜಿತ ಸಂವಾದ ಕೇಂದ್ರಗಳಲ್ಲಿ ಸಂದರ್ಶಕರನ್ನು ಭೇಟಿ ಮಾಡಲು ಲಭ್ಯವಿರುವುದಾಗಿ ಅವರು ವಿವರಿಸಿದ್ದಾರೆ.

ಹಿಮಾಚಲ ಪ್ರದೇಶದ ದೊಡ್ಡ ಸಂಖ್ಯೆಯ ಪ್ರವಾಸಿಗಳನ್ನು ಆಕರ್ಷಿಸುತ್ತಿದೆ. ಆದ್ದರಿಂದ ಮಂಡಿ ಪ್ರದೇಶದ ಒಂದು ಆಧಾರ್ ಕಾರ್ಡ್ ತರುವುದು ಅಗತ್ಯ. ಕ್ಷೇತ್ರದಲ್ಲಿ ನಿಮ್ಮ ಕೆಲಸದ ಸಂಬಂಧದ ವಿವರವನ್ನು ಒಂದು ಪತ್ರದಲ್ಲಿ ಲಿಖಿತವಾಗಿ ನೀಡಬೇಕು. ಆದ್ದರಿಂದ ಯಾವುದೇ ಅನಾನುಕೂಲವಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು. ಜುಲೈ 11ರಂದು ನಡೆದ ಸಾರ್ವಜನಿಕ ಸಂವಾದದಲ್ಲಿ, ಸ್ಥಳೀಯ ಪಂಚಾಯ್ತಿ ಹಾಗೂ ವಿಧಾನಸಭೆ ಮಟ್ಟದ ಸಮಸ್ಯೆಗಳಿಗಿಂತ ಹೆಚ್ಚಾಗಿ ರಾಷ್ಟ್ರಮಟ್ಟದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸಂಸದೆಯಾಗಿ ನನ್ನ ಪಾತ್ರವನ್ನು ನಿರ್ವಹಿಸುವುದು ನನ್ನ ಆದ್ಯತೆ" ಎಂದು ತಿಳಿಸಿದ್ದಾರೆ.

ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಂಗನಾ ರಣಾವತ್ ವಿರುದ್ಧ ಸ್ಪರ್ಧಿಸಿ, ಸೋತಿದ್ದ ಕಾಂಗ್ರೆಸ್ ನಾಯಕ, ಹಿಮಾಚಲದ ಹಾಲಿ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ಅವರು, ಕಂಗನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಕ್ಷೇತ್ರದ ಜನರು ಅವರನ್ನು ಭೇಟಿ ಮಾಡಲು ಬಯಸಿದರೆ, ಆಧಾರ್ ಕಾರ್ಡ್ ತರುವ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ.

ನಾವು ಜನಪ್ರತಿನಿಧಿಗಳು. ಹಾಗಾಗಿ ರಾಜ್ಯದ ಪ್ರತಿಯೊಂದು ವರ್ಗದ ಜನರನ್ನು ಭೇಟಿ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಅದು ಸಣ್ಣ ಕೆಲಸವಾಗಲಿ, ದೊಡ್ಡ ಕೆಲಸವಾಗಲಿ, ನೀತಿ ವಿಷಯವಾಗಲಿ ಅಥವಾ ವೈಯಕ್ತಿಕ ಕೆಲಸವಾಗಲಿ – ಭೇಟಿಗೆ ಯಾವುದೇ ಗುರುತಿನ ಚೀಟಿಯ ಅಗತ್ಯವಿಲ್ಲ. ಒಬ್ಬ ವ್ಯಕ್ತಿ ಸಾರ್ವಜನಿಕ ಪ್ರತಿನಿಧಿಯ ಬಳಿಗೆ ಬರುತ್ತಿದ್ದಾರೆ ಎಂದರೆ, ಅವರು ಯಾವುದೋ ಕೆಲಸಕ್ಕಾಗಿ ಬರುತ್ತಿದ್ದಾರೆ ಎಂದೇ ಅರ್ಥ. ಭೇಟಿಗೆ ಬರುವವರು ಪತ್ರ ಬರೆದುಕೊಂಡು ಬರಬೇಕೆಂದು ಕೇಳುವುದು ಸರಿಯಲ್ಲ” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT