ಬಿಜೆಪಿ ಸುದ್ದಿಗೋಷ್ಠಿ 
ದೇಶ

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗೆ SC, ST ಹಣ ಬಳಕೆ ರಾಹುಲ್‌ ಗಾಂಧಿ ದ್ವಂದ್ವ ನೀತಿಯನ್ನು ಬಯಲು ಮಾಡಿದೆ: BJP

ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡಿದೆ ಎಂದು ಆರೋಪಿಸಿದ ಮೇಘವಾಲ್, ಅವರು ಕೆಲವು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರಬಹುದು ಆದರೆ ಜನರ ಹೃದಯವನ್ನು ಎಂದಿಗೂ ಗೆಲ್ಲಲು ಸಾಧ್ಯವಿಲ್ಲ ಎಂದರು.

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮೀಸಲಾಗಿಟ್ಟಿರುವ ನಿಧಿಯನ್ನು ರಾಜ್ಯ ಚುನಾವಣಾ ಸಮಯದಲ್ಲಿ ರಾಹುಲ್ ಗಾಂಧಿ ನೀಡಿದ ಭರವಸೆಗಳನ್ನು ಈಡೇರಿಸಲು ಬೇರೆಡೆಗೆ ತಿರುಗಿಸುತ್ತಿದೆ. ಇದು ಅವರ ದ್ವಂದ್ವ ನೀತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿಸಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಸಂವಿಧಾನದ ಉಲ್ಲಂಘನೆಯಾಗಿದ್ದು, ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕರ್ನಾಟಕದಲ್ಲಿ ಜನರನ್ನು ವಂಚಿಸಲಾಗುತ್ತಿದೆ. ಒಂದೆಡೆ ರಾಹುಲ್ ಗಾಂಧಿ ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡು ತಿರುಗಾಡುತ್ತಾರೆ. ಆದರೆ ಕರ್ನಾಟಕ ರಾಜ್ಯದಲ್ಲಿ ಸಾಂವಿಧಾನಿಕ ಮೌಲ್ಯಗಳಿಗೆ ಧಕ್ಕೆಯಾಗುತ್ತಿದೆ. ಎಸ್‌ಸಿ ಮತ್ತು ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಾದ 39,121 ಕೋಟಿ ರೂ.ಗಳಲ್ಲಿ 14,730 ಕೋಟಿ ರೂ.ಗಳನ್ನು 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಭರವಸೆಗಳಡಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ವ್ಯಯಿಸುತ್ತಿದೆ ಎಂದು ಅವರು ವರದಿಯನ್ನು ಉಲ್ಲೇಖಿಸಿ ಹೇಳಿದರು.

ಇತ್ತೀಚಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸುಳ್ಳು ಪ್ರಚಾರ ಮಾಡಿದೆ ಎಂದು ಆರೋಪಿಸಿದ ಮೇಘವಾಲ್, ಅವರು ಕೆಲವು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿರಬಹುದು ಆದರೆ ಜನರ ಹೃದಯವನ್ನು ಎಂದಿಗೂ ಗೆಲ್ಲಲು ಸಾಧ್ಯವಿಲ್ಲ. ಮೋದಿ ಸರ್ಕಾರವು ದೊಡ್ಡ ಜನಾದೇಶವನ್ನು ಪಡೆಯುವ ಮೂಲಕ ಸಂವಿಧಾನವನ್ನು ಬದಲಾಯಿಸಲು ಬಯಸಿದೆ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ. ಅವರ ಕಾರ್ಯಗಳೇ ಅವರ ಧ್ವಂದ್ವ ನೀತಿಯನ್ನು ತೋರಿಸುತ್ತಿದೆ ಎಂದು ಕಿಡಿಕಾರಿದರು.

ಇತ್ತೀಚೆಗೆ ವಿಚ್ಛೇದಿತ ಮುಸ್ಲಿಂ ಮಹಿಳೆಗೆ ತನ್ನ ಪತಿಯಿಂದ ಜೀವನಾಂಶವನ್ನು ಪಡೆಯುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನ ಬಗ್ಗೆ ಕೇಳಿದಾಗ, ಸುಪ್ರೀಂ ಕೋರ್ಟ್‌ನ ತೀರ್ಪನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ