ಸ್ಮೃತಿ ಇರಾನಿ ಮತ್ತು ರಾಹುಲ್ ಗಾಂಧಿ 
ದೇಶ

ಜೀವನದಲ್ಲಿ ಸೋಲು-ಗೆಲುವು ಸಹಜ; ಸ್ಮೃತಿ ಇರಾನಿ ಅಪಹಾಸ್ಯ ಬೇಡ: ಬೆಂಬಲಿಗರಿಗೆ ರಾಹುಲ್ ಕಿವಿಮಾತು

ನಾವು ಮತ್ತೊಬ್ಬರನ್ನು ಅವಮಾನಿಸುವುದೆಂದರೆ ಅದು ದೌರ್ಬಲ್ಯದ ಸಂಕೇತವಾಗುತ್ತದೆಯೇ ಹೊರತು ನಮ್ಮ ಶಕ್ತಿಯಲ್ಲ ಎಂದು ರಾಹುಲ್ ಹೇಳಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಠಿಯಿಂದ ಸ್ಪರ್ಧಿಸಿ ಸೋಲು ಕಂಡಿರುವ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ವಿರುದ್ಧ ಅವಹೇಳನಕಾರಿ ಭಾಷೆ ಮತ್ತು ಹೇಳಿಕೆಗಳನ್ನು ನೀಡದಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ‘ಜೀವನದಲ್ಲಿ ಸೋಲು–ಗೆಲುವು ಸಾಮಾನ್ಯ. ಆದೇ ರೀತಿ ಸ್ಮೃತಿ ಇರಾನಿ ಅಥವಾ ಇತರ ಯಾವುದೇ ನಾಯಕರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಬಾರದು. ಅಸಹ್ಯವಾಗಿ ವರ್ತಿಸುವುದನ್ನು ನಿಲ್ಲಿಸುವಂತೆ ನಾನು ಎಲ್ಲರಲ್ಲೂ ಮನವಿ ಮಾಡುತ್ತೇನೆ. ನಾವು ಮತ್ತೊಬ್ಬರನ್ನು ಅವಮಾನಿಸುವುದೆಂದರೆ ಅದು ದೌರ್ಬಲ್ಯದ ಸಂಕೇತವಾಗುತ್ತದೆಯೇ ಹೊರತು ನಮ್ಮ ಶಕ್ತಿಯಲ್ಲ ಎಂದು ಬರೆದುಕೊಂಡಿದ್ದಾರೆ.

‌2024ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಒಟ್ಟು 797 ಮಹಿಳಾ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. ಅವರ ಪೈಕಿ ಹಲವರು ಖ್ಯಾತನಾಮರ ವಿರುದ್ಧ ಗೆಲುವು ಸಾಧಿಸುವ ಮೂಲಕ ಗಮನ ಸೆಳೆದಿದ್ದಾರೆ. ಮತ್ತೆ ಕೆಲವರು ಅಚ್ಚರಿ ಎಂಬಂತೆ ಸೋಲು ಕಂಡಿದ್ದಾರೆ. ಆ ಪೈಕಿ ಉತ್ತರ ಪ್ರದೇಶದ ಅಮೇಥಿಯಿಂದ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಸ್ಪರ್ಧಿಸಿ ಸೋತಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡ ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಅವರು ದೆಹಲಿಯ ಲುಟಿಯನ್ಸ್‌ನ 28 ತುಘಲಕ್ ಕ್ರೆಸೆಂಟ್‌ನಲ್ಲಿರುವ ತಮ್ಮ ಅಧಿಕೃತ ಬಂಗಲೆಯನ್ನು ಖಾಲಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT