ಸಾಂದರ್ಭಿಕ ಚಿತ್ರ 
ದೇಶ

ಪೂರ್ವ ಲಡಾಖ್‌ನ ಎಲ್‌ಎಸಿಯಲ್ಲಿ ಕರ್ತವ್ಯ ನಿರತ ಯೋಧ ಹುತಾತ್ಮ

ಇಂದು ನಡೆದ ಅಪಘಾತದಲ್ಲಿ ಯೋಧ ಶಂಕರ ರಾವ್ ಗೊತ್ತಾಪು ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು ಎಂದು ಅವರು ಹೇಳಿದ್ದಾರೆ. ಆದರೆ, ಅಪಘಾತದ ಸ್ವರೂಪವನ್ನು ವಿವರಿಸಿಲ್ಲ.

ಲಡಾಖ್: ಪೂರ್ವ ಲಡಾಖ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಕರ್ತವ್ಯ ನಿರತ ಯೋಧರೊಬ್ಬರು ಅಪಘಾತವೊಂದರಲ್ಲಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಂದು ನಡೆದ ಅಪಘಾತದಲ್ಲಿ ಯೋಧ ಶಂಕರ ರಾವ್ ಗೊತ್ತಾಪು ಅವರಿಗೆ ಮಾರಣಾಂತಿಕ ಗಾಯಗಳಾಗಿತ್ತು ಎಂದು ಅವರು ಹೇಳಿದ್ದಾರೆ. ಆದರೆ, ಅಪಘಾತದ ಸ್ವರೂಪವನ್ನು ವಿವರಿಸಿಲ್ಲ. ಪೂರ್ವ ಲಡಾಖ್‌ನಲ್ಲಿ ನಿಯೋಜಿಸಲಾದ ವೀರ ಸೈನಿಕನನ್ನು ಕಳೆದುಕೊಂಡಿದ್ದಕ್ಕೆ ಭಾರತೀಯ ಸೇನೆಯು ವಿಷಾದಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಲಡಾಖ್‌ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಮಂದಿರ ಮೋರ್ಹ್‌ನಲ್ಲಿ T-72 ಟ್ಯಾಂಕ್‌ನ ಹಠಾತ್ ಪ್ರವಾಹದಿಂದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಐವರು ಸೈನಿಕರು ಹುತಾತ್ಮರಾದ ಕೆಲ ದಿನಗಳ ಬಳಿಕ ಈ ಬೆಳವಣಿಗೆಯಾಗಿದೆ. .

ಸೇನೆಯ ಅಧಿಕಾರಿಗಳ ಪ್ರಕಾರ, ಟ್ಯಾಂಕರ್ ನದಿ ದಾಟುವ ಅಭ್ಯಾಸದ ಸಮಯದಲ್ಲಿ ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಯಿಂದ ಅವಘಡ ಸಂಭವಿಸಿತ್ತು ಎಂದು ಸೇನೆ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ