ಮುಂಬೈ: ಏಷ್ಯಾದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವೈಭವೋಪೇತ ಮದುವೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಪಾಲ್ಗೊಂಡರು.
ಮುಂಬೈನ ಜಿಯೋ ವರ್ಲ್ಡ್ ಡ್ರೈವ್‌ನಲ್ಲಿರುವ ಅಂಬಾನಿ ಒಡೆತನದ ಕನ್ವೆನ್ಷನ್ ಸೆಂಟರ್ ನಲ್ಲಿ ವಿವಾಹ ಮಹೋತ್ಸವದ ಭಾಗವಾಗಿ ಇಂದು ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಶುಭ ಆಶೀರ್ವಾದ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಿ, ನವ ಜೋಡಿಗೆ ಆಶೀರ್ವದಿಸಿದರು.
29 ವರ್ಷದ ಅನಂತ್ ಅಂಬಾನಿ ಅವರು, ಭಾರತೀಯ ಫಾರ್ಮಾ ಉದ್ಯಮಿಗಳಾದ ವೀರೇನ್ ಮತ್ತು ಶೈಲಾ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಅವರೊಂದಿಗೆ ನಿನ್ನೆ ರಾತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಈ ಅದ್ಧೂರಿ ಮದುವೆಯಲ್ಲಿ ಜಗತ್ತಿನ ಅತಿ ಜನಪ್ರಿಯ ಸೆಲೆಬ್ರಿಟಿಗಳು, ರಾಜಕಾರಣಿಗಳು, ಹಾಲಿವುಡ್ ಸೆಲೆಬ್ರಿಟಿಗಳು, ಬಾಲಿವುಡ್ ತಾರೆಯರು, ದಕ್ಷಿಣ ಭಾರತದ ಸಿನಿಮಾ ಮಂದಿ ಸೇರಿದಂತೆ ನೂರಾರು ಗಣ್ಯರು ಮದುವೆಗೆ ಸಾಕ್ಷಿಯಾದರು.