ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇರಾನ್ ಸೆಕ್ಟರ್‌ನಲ್ಲಿ ಭಾನುವಾರ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ, ಮೂವರು ಅಪರಿಚಿತ ಭಯೋತ್ಪಾದಕರು ಹತ್ಯೆ ಮಾಡಿದೆ.
ವರದಿಗಳ ಪ್ರಕಾರ, ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಸೇನೆ ಹೇಳಿದೆ.
"ಪ್ರಸ್ತುತ ಕೆರಾನ್ ಸೆಕ್ಟರ್‌ನ ಎಲ್‌ಒಸಿಯಲ್ಲಿ ನಡೆಯುತ್ತಿರುವ ಒಳನುಸುಳುವಿಕೆ-ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ" ಎಂದು ಶ್ರೀನಗರ ಮೂಲದ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.