ಅಜಿತ್ ಪವಾರ್ 
ದೇಶ

ಬಾರಾಮತಿಯಿಂದ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಅಜಿತ್ ಪವಾರ್ ಚಾಲನೆ

ಮಹಾಯುತಿ ಮೈತ್ರಿಕೂಟ ಸರ್ಕಾರ ಮಹಿಳೆಯರಿಗೆ ನೀಡಿರುವ ಆರ್ಥಿಕ ನೆರವು ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಪ್ರಸ್ತಾಪಿಸಿ ಅಜಿತ್ ಪವಾರ್ ಅವರು ಮತಯಾಚಿಸಿದರು.

ಬಾರಾಮತಿ: ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಭಾನುವಾರ ಶರದ್ ಪವಾರ್ ಅವರ ಭದ್ರಕೋಟೆಯಾದ ಬಾರಾಮತಿಯಿಂದ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿದ್ದಾರೆ.

ಇಂದು ಬಾರಾಮತಿಯಲ್ಲಿ ಮಹಾಯುತಿ ಮೈತ್ರಿಕೂಟ ಸರ್ಕಾರ ಮಹಿಳೆಯರಿಗೆ ನೀಡಿರುವ ಆರ್ಥಿಕ ನೆರವು ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಪ್ರಸ್ತಾಪಿಸಿ ಅಜಿತ್ ಪವಾರ್ ಅವರು ಮತಯಾಚಿಸಿದರು.

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ನಂಬುವಂತೆ ಮತ್ತು ವಿರೋಧಿಗಳು ಹರಡುವ ಸಂವಿಧಾನ ಬದಲಾಯಿಸುವ ಪ್ರಯತ್ನಗಳು ಸೇರಿದಂತೆ ಇತರೆ ಯಾವುದೇ "ಸುಳ್ಳುಗಳನ್ನು" ನಂಬಬೇಡಿ ಎಂದು ಅಜಿತ್ ಪವಾರ್ ಕೇಳಿಕೊಂಡರು.

"ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ(ಅಕ್ಟೋಬರ್‌ನಲ್ಲಿ), ಕೆಲವರು ಸುಳ್ಳು ಸುದ್ದಿಗಳನ್ನು ಹರಡಲು ಪ್ರಯತ್ನಿಸುತ್ತಾರೆ. ಆದರೆ ಅದನ್ನು ನೀವು ನಂಬಬೇಡಿ. ನಾವು ಬದುಕಿರುವವರೆಗೆ ಯಾರೂ ಸಂವಿಧಾನವನ್ನು ಬದಲಾಯಿಸುವ ಧೈರ್ಯ ಮಾಡುವುದಿಲ್ಲ" ಎಂದು ಮಹಾ ಡಿಸಿಎಂ ಹೇಳಿದರು.

ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರ್ಕಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಅಜಿತ್ ಪವಾರ್ ಅವರು, ಇತ್ತೀಚೆಗೆ ಪ್ರಾರಂಭಿಸಲಾದ "ಮಝಿ ಲಡ್ಕಿ ಬಹಿನ್ ಯೋಜನೆ" ಯನ್ನು ಪ್ರಮುಖವಾಗಿ ಪ್ರಮುಖವಾಗಿ ಪ್ರಸ್ತಾಪಿಸಿದರು. ಇದು ಅರ್ಹ ಮಹಿಳೆಯರಿಗೆ ಮಾಸಿಕ 1,500 ರೂಪಾಯಿಗಳ ಆರ್ಥಿಕ ಸಹಾಯ ಒದಗಿಸುವ ಗುರಿಯನ್ನು ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT