ಅಮಿತ್ ಶಾ 
ದೇಶ

ಮಧ್ಯ ಪ್ರದೇಶದ 55 ಜಿಲ್ಲೆಗಳಲ್ಲಿ 'PM ಕಾಲೇಜ್ ಆಫ್ ಎಕ್ಸಲೆನ್ಸ್' ಉದ್ಘಾಟಿಸಿದ ಅಮಿತ್ ಶಾ

2047ರಲ್ಲಿ ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿದ್ದು, ಈ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ.

ಇಂದೋರ್‌: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಮಧ್ಯಪ್ರದೇಶದ ಎಲ್ಲಾ 55 ಜಿಲ್ಲೆಗಳಲ್ಲಿ 'ಪ್ರಧಾನ ಮಂತ್ರಿ ಕಾಲೇಜ್ ಆಫ್ ಎಕ್ಸಲೆನ್ಸ್' ಅನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು ಮತ್ತು 2047 ರ ವೇಳೆಗೆ ಭಾರತ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯ ನಡುವೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುವಲ್ಲಿ ನರೇಂದ್ರ ಮೋದಿಯವರ ದೂರದೃಷ್ಟಿಯನ್ನು ಶ್ಲಾಘಿಸಿದರು.

ಇಂದು ಇಂದೋರ್‌ನ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ 55 'ಪಿಎಂ ಕಾಲೇಜ್ ಆಫ್ ಎಕ್ಸಲೆನ್ಸ್' ಉದ್ಘಾಟಿಸಿ ಮಾತನಾಡಿದ ಅಮಿ ಶಾ, ಇತರ ರಾಜ್ಯಗಳಿಗಿಂತ ಮೊದಲು ಎನ್‌ಇಪಿಯನ್ನು ಜಾರಿಗೆ ತಂದಿರುವ ಮಧ್ಯ ಪ್ರದೇಶವನ್ನು ಶ್ಲಾಘಿಸಿದರು.

2047ರಲ್ಲಿ ದೇಶವು 100 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿದ್ದು, ಈ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಎನ್‌ಇಪಿ ಅದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

"NEP ನಮ್ಮ ವಿದ್ಯಾರ್ಥಿಗಳನ್ನು ವಿಶ್ವದ ಜನರೊಂದಿಗೆ ಸಮನಾಗಿ ನಿಲ್ಲುವಂತೆ ಮಾಡುತ್ತದೆ ಮತ್ತು ದೇಶದ ಸಂಸ್ಕೃತಿಯನ್ನು ಒಂದುಗೂಡಿಸುತ್ತದೆ. ಇದು ಗುಣಮಟ್ಟದ ಮೇಲೆ ಕೇಂದ್ರೀಕೃತವಾಗಿದೆ ಎಂದು ಅಮಿತ್ ಶಾ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ