ನವದೆಹಲಿ: ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ನಡೆಸಿ, ಹತ್ಯೆಗೆ ಯತ್ನ ನಡೆಸಲಾಗಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದ್ದಾರೆ.
ನನ್ನ ಸ್ನೇಹಿತ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ದಾಳಿಯಿಂದ ತೀವ್ರ ಕಳವಳಗೊಂಡಿದ್ದೇನೆ. ಘಟನೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯ ಮತ್ತು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ತಿಳಿಸಿದ್ದಾರೆ.
ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಮೃತರ ಕುಟುಂಬ, ಗಾಯಗೊಂಡವರು ಮತ್ತು ಅಮೇರಿಕಾ ಜನರೊಂದಿಗೆ ಇವೆ ಎಂದು ಹೇಳಿದರು.