ಭೋಪಾಲ್: ಮೂರು ತಿಂಗಳ ಹಿಂದಷ್ಟೇ ನಿವೃತ್ತರಾಗಿದ್ದ ಮಧ್ಯ ಪ್ರದೇಶ ಹೈಕೋರ್ಟ್ ಮಾಜಿ ನ್ಯಾಯಾಧೀಶ ರೋಹಿತ್ ಆರ್ಯ ಅವರು ಶನಿವಾರ ಆಡಳಿತಾರೂಢ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಭೋಪಾಲ್‌ನಲ್ಲಿರುವ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ರೋಹಿತ್ ಆರ್ಯ ಅವರು ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ರಾಜ್ಯ ಪ್ರಧಾನ ಕಚೇರಿಯ ಉಸ್ತುವಾರಿ ಡಾ.ರಾಘವೇಂದ್ರ ಶರ್ಮಾ ಅವರು ನಿವೃತ್ತ ನ್ಯಾಯಾಧೀಶರನ್ನು ಪಕ್ಷಕ್ಕೆ ಸ್ವಾಗತಿಸಿದರು. ನಂತರ ಅವರು ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ವಿಚಾರ ಸಂಕಿರಣವನ್ನು ಉದ್ದೇಶಿಸಿ ಮಾತನಾಡಿದರು.
1962ರಲ್ಲಿ ಜನಿಸಿದ ರೋಹಿತ್ ಆರ್ಯ, 1984ರಲ್ಲಿ ವಕೀಲಿಕೆ ವೃತ್ತಿಗೆ ನೋಂದಾಯಿಸಿಕೊಂಡಿದ್ದರು. 2003ರಲ್ಲಿ ಅವರನ್ನು ಮಧ್ಯಪ್ರದೇಶ ಹೈಕೋರ್ಟಿನ ಹಿರಿಯ ವಕೀಲರನ್ನಾಗಿ ನೇಮಿಸಲಾಗಿತ್ತು.
ರೋಹಿತ್ ಆರ್ಯ2013ರಲ್ಲಿ ಅವರಿಗೆ ಹೈಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ರೋಹಿತ್ ಆರ್ಯ ಅವರು 2015ರಲ್ಲಿ ಖಾಯಂ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಎಪ್ರಿಲ್ 27, 2024ರಲ್ಲಿ ಅವರು ತಮ್ಮ ಸೇವೆಯಿಂದ ನಿವೃತ್ತರಾಗಿದ್ದರು.