ರಾಹುಲ್ ಗಾಂಧಿ  
ದೇಶ

'ಡೊನಾಲ್ಡ್ ಟ್ರಂಪ್ ಮೇಲಿನ ಹತ್ಯೆ ಯತ್ನವನ್ನು ಪ್ರಬಲ ಪದಗಳಲ್ಲಿ ಖಂಡಿಸಬೇಕು': ರಾಹುಲ್ ಗಾಂಧಿ

ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ನಡೆದ ಹತ್ಯೆಯ ಯತ್ನದಲ್ಲಿ ಟ್ರಂಪ್ ಕಿವಿಗೆ ಗುಂಡು ಹಾರಿಸಿದ್ದರಿಂದ ಗಾಯಗೊಂಡರು, ನಂತರ ಪುರುಷ ದಾಳಿಕೋರನನ್ನು ಸೀಕ್ರೇಟ್ ಸರ್ವಿಸ್ ಸದಸ್ಯರೊಬ್ಬರು ಗುಂಡಿಕ್ಕಿ ಕೊಂದರು.

ನವದೆಹಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನದ ಬಗ್ಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಕೃತ್ಯಗಳನ್ನು ಬಲವಾಗಿ ಖಂಡಿಸಬೇಕು ಎಂದು ಹೇಳಿದ್ದಾರೆ.

ಪೆನ್ಸಿಲ್ವೇನಿಯಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ನಡೆದ ಹತ್ಯೆಯ ಯತ್ನದಲ್ಲಿ ಟ್ರಂಪ್ ಕಿವಿಗೆ ಗುಂಡು ಹಾರಿಸಿದ್ದರಿಂದ ಗಾಯಗೊಂಡರು, ನಂತರ ಪುರುಷ ದಾಳಿಕೋರನನ್ನು ಸೀಕ್ರೇಟ್ ಸರ್ವಿಸ್ ಸದಸ್ಯರೊಬ್ಬರು ಗುಂಡಿಕ್ಕಿ ಕೊಂದರು.

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಯತ್ನದಿಂದ ನಾನು ತೀವ್ರ ಕಳವಳಗೊಂಡಿದ್ದೇನೆ. ಅಂತಹ ಕೃತ್ಯಗಳನ್ನು ಸಾಧ್ಯವಾದಷ್ಟು ಪ್ರಬಲ ಪದಗಳಲ್ಲಿ ಖಂಡಿಸಬೇಕು ಎಂದು ಎಕ್ಸ್‌ ಪೋಸ್ಟ್‌ನಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ.

ಮಾಜಿ ಅಧ್ಯಕ್ಷ ಟ್ರಂಪ್ ಅವರು ಶೀಘ್ರವಾಗಿ ಮತ್ತು ಸಂಪೂರ್ಣ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ನಿನ್ನೆ ಶನಿವಾರ ಸಂಜೆ ಬಟ್ಲರ್‌ನ ರ್ಯಾಲಿ ಸ್ಥಳದ ಹೊರಗಿನ ಎತ್ತರದ ಸ್ಥಾನದಿಂದ ಶಂಕಿತ ಶೂಟರ್ ವೇದಿಕೆಯತ್ತ ಅನೇಕ ಗುಂಡುಗಳನ್ನು ಹಾರಿಸಿದಾಗ 78 ವರ್ಷದ ಟ್ರಂಪ್ ಅವರ ಬಲ ಕಿವಿಯ ಮೇಲ್ಭಾಗದಲ್ಲಿ ಗುಂಡು ತಗುಲಿತು ಎಂದು ಯುಎಸ್ ರಹಸ್ಯ ಸೇವೆ ತಿಳಿಸಿದೆ. ದಾಳಿಕೋರರು ರ್ಯಾಲಿಯಲ್ಲಿ ಒಬ್ಬ ಪ್ರೇಕ್ಷಕ ಮೃತಪಟ್ಟು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT