ಪೂಜಾ ಖೇಡ್ಕರ್ ಅವರ ತಾಯಿ 
ದೇಶ

ಪುಣೆ: ಗನ್ ದುರ್ಬಳಕೆ ಆರೋಪದ ಮೇಲೆ ಪೂಜಾ ಖೇಡ್ಕರ್ ತಾಯಿ ವಿರುದ್ಧ ಎಫ್ಐಆರ್ ದಾಖಲು

ಗ್ರಾಮಸ್ಥರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುವ ಮೂಲಕ ಪರವಾನಗಿ ಪಡೆದ ಗನ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಪುಣೆ ಪೊಲೀಸರು ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಪುಣೆ: ವಿವಾದಿತ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಬಂದೂಕು ತೋರಿಸಿ ಬೆದರಿಕೆ ಹಾಕುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪುಣೆ ಪೊಲೀಸರು ಅವರ ವಿರುದ್ಧ ಗನ್ ದುರ್ಬಳಕೆ ಆರೋಪದ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ.

ಗ್ರಾಮಸ್ಥರಿಗೆ ಬಂದೂಕು ತೋರಿಸಿ ಬೆದರಿಕೆ ಹಾಕುವ ಮೂಲಕ ಪರವಾನಗಿ ಪಡೆದ ಗನ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಪುಣೆ ಪೊಲೀಸರು ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಪುಣೆ ಪೊಲೀಸರು ಭಾನುವಾರ ಖೇಡ್ಕರ್ ಬಂಗಲೆಗೆ ಭೇಟಿ ನೀಡಿದ್ದರು. ಆದರೆ ಮನೋರಂ ಖೇಡ್ಕರ್ ಬಾಗಿಲು ತೆರೆಯಲು ನಿರಾಕರಿಸಿದ ನಿಮ್ಮ ಬಂದೂಕು ಪರವಾನಗಿಯನ್ನು ಏಕೆ ರದ್ದುಗೊಳಿಸಬಾರದು ಎಂಬುದನ್ನು ವಿವರಿಸುವಂತೆ ಪೊಲೀಸರು ನೋಟಿಸ್‌ ನೀಡಿದ್ದಾರೆ. ಅಲ್ಲದೆ 10 ದಿನಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದ್ದಾರೆ.

ಪುಣೆ ಜಿಲ್ಲೆಯ ಮುಲ್ಶಿ ತಹಸಿಲ್‌ನಲ್ಲಿ ಮಹಾರಾಷ್ಟ್ರದ ನಿವೃತ್ತ ಸರ್ಕಾರಿ ಅಧಿಕಾರಿಯಾಗಿರುವ ಪೂಜಾ ಅವರ ತಂದೆ ದಿಲೀಪ್ ಖೇಡ್ಕರ್ ಅವರು ಖರೀದಿಸಿದ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ವಾಗ್ವಾದ ನಡೆದಿದ್ದು, ಈ ವೇಳೆ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ.

ಅಕ್ಕಪಕ್ಕದ ರೈತರ ಜಮೀನನ್ನು ಖೇಡ್ಕರ್‌ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎರಡು ನಿಮಿಷಗಳ ಈ ವಿಡಿಯೋದಲ್ಲಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ತಮ್ಮ ಖಾಸಗಿ ಭದ್ರತಾ ಸಿಬ್ಬಂದಿಯೊಂದಿಗೆ ನೆರೆಹೊರೆಯವರೊಂದಿಗೆ ತೀವ್ರ ವಾಗ್ವಾದದಲ್ಲಿ ತೊಡಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!