ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಗುಜರಾತ್​ನಲ್ಲಿ ಭೀಕರ ಅಪಘಾತ: ಬಸ್​ಗೆ ಲಾರಿ ಡಿಕ್ಕಿ, 6 ಮಂದಿ ದುರ್ಮರಣ

ಬಸ್ ಮಹಾರಾಷ್ಟ್ರದಿಂದ ರಾಜಸ್ಥಾನಕ್ಕೆ ಹೋಗುತ್ತಿತ್ತು. ಆನಂದ್ ಬಳಿ ಬಸ್ ಪಂಕ್ಚರ್ ಆಗಿತ್ತು. ಇದರಿಂದಾಗಿ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದು ನಿಂತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳ.
Manjula VN
Updated On : 15 Jul 2024, 11:12 am

ಆನಂದ್ (ಗುಜರಾತ್): ಗುಜರಾತ್​ನ ಆನಂದ್​ ಬಳಿ ಬಸ್'ಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಅಹಮದಾಬಾದ್ ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

ಇಂದು ಬೆಳಿಗ್ಗೆ 4.30 ರ ಸುಮಾರಿಗೆ ಐಷಾರಾಮಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದಿದೆ. 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಬಸ್ ಮಹಾರಾಷ್ಟ್ರದಿಂದ ರಾಜಸ್ಥಾನಕ್ಕೆ ಹೋಗುತ್ತಿತ್ತು. ಆನಂದ್ ಬಳಿ ಬಸ್ ಪಂಕ್ಚರ್ ಆಗಿತ್ತು. ಇದರಿಂದಾಗಿ ಬಸ್ಸಿನ ಚಾಲಕ ಹಾಗೂ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದು ನಿಂತಿದ್ದರು. ಈ ವೇಳೆ ಹಿಂದಿನಿಂದ ಬಂದ ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

Advertisement

Also Read

ಗುಜರಾತ್'ನಲ್ಲಿ ಭೀಕರ ಅಪಘಾತ: ಬಸ್'ಗೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ, ಇಬ್ಬರ ದುರ್ಮರಣ

ಅಪಘಾತದ ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳ, ಎಕ್ಸ್‌ಪ್ರೆಸ್ ಹೈವೇ ಪೆಟ್ರೋಲಿಂಗ್ ತಂಡ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಎಲ್ಲಾ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಿದ್ದಾರೆ. ಡಿಕ್ಕಿಯ ನಂತರ ಬಸ್ ಮತ್ತು ಟ್ರಕ್ ತೀವ್ರವಾಗಿ ಜಖಂಗೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement