ದೋಡಾ ಜಿಲ್ಲೆಯಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಸಿಬ್ಬಂದಿ. Photo | PTI
ದೇಶ

ಜಮ್ಮು ಕಾಶ್ಮೀರ: ದೋಡಾದಲ್ಲಿ ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಚಕಮಕಿ: ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರು ಹಾಗೂ ಭಾರತೀಯ ಸೇನೆ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ (ಜೆಕೆ ಪೊಲೀಸ್) ವಿಶೇಷ ಕಾರ್ಯಾಚರಣೆ ಗ್ರೂಪ್ ಸಿಬ್ಬಂದಿ ದೇಸಾ ಅರಣ್ಯ ಪ್ರದೇಶದ ಧರಿ ಗೋಟೆ ಉರರಬಾಗಿಯಲ್ಲಿ ರಾತ್ರಿ 7.45 ರ ಸುಮಾರಿಗೆ ಜಂಟಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್‌ಕೌಂಟರ್ ಪ್ರಾರಂಭವಾಗಿದೆ ಎಂದು ವರದಿಗಳು ತಿಳಿಸಿವೆ.

ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್ಕೌಂಟರ್ ನಡೆಯುತ್ತಿರುವ ಪ್ರದೇಶಕ್ಕೆ ಹೆಚ್ಚುವರಿ ಯೋಧರನ್ನು ರವಾನಿಸಲಾಗಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿಯ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪೊಲೀಸ್ ವಕ್ತಾರರು ಎನ್‌ಕೌಂಟರ್ ಅನ್ನು ಖಚಿತಪಡಿಸಿದ್ದಾರೆ, ಆದರೆ ಹೆಚ್ಚಿನ ಮಾಹಿತಿಗಾಗಿ ಇನ್ನೂ ಕಾಯಲಾಗುತ್ತಿದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಭಯೋತ್ಪಾದಕರ ಅಡಗುತಾಣದಿಂದ ಶಸ್ತ್ರಾಸ್ತ್ರಗಳು ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

30 ಸುತ್ತುಗಳ ಎಕೆ-47, ಎಕೆ-47 ರೈಫಲ್‌ನ ಒಂದು ಮ್ಯಾಗಜೀನ್ ಮತ್ತು ಒಂದು ಎಚ್‌ಇ-36 ಹ್ಯಾಂಡ್ ಗ್ರೆನೇಡ್ ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 35 ದಿನಗಳಲ್ಲಿ ದೋಡಾ ಪ್ರದೇಶದಲ್ಲಿ ಇದು 4ನೇ ಎನ್‌ಕೌಂಟರ್ ಆಗಿದೆ. ಇದೇ ಸಮಯದಲ್ಲಿ, ಸೋಮವಾರ ಜಮ್ಮು ಮತ್ತು ಕಥುವಾ ಜಿಲ್ಲೆಗಳಲ್ಲಿ ಶಂಕಿತರು ಕಾಣಿಸಿಕೊಂಡಿದ್ದಾರೆ. ಇದಾದ ಬಳಿಕ ಭದ್ರತಾ ಪಡೆಗಳು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು

SCROLL FOR NEXT