ನೀತಿ ಆಯೋಗ  
ದೇಶ

ನೀತಿ ಆಯೋಗ ಮರು ರಚನೆ: 15 ಸಚಿವರು, ಬಿಜೆಪಿ ಮಿತ್ರಪಕ್ಷಗಳು ಸೇರ್ಪಡೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿ ಉಳಿದಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಥಶಾಸ್ತ್ರಜ್ಞ ಸುಮನ್ ಕೆ ಬೆರಿ ಅವರು ನೀತಿ ಆಯೋಗದ ಉಪಾಧ್ಯಕ್ಷರಾಗಿ ಮುಂದುವರಿಯುತ್ತಾರೆ.

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ-3.0 ನೀತಿ ಆಯೋಗವನ್ನು ಪುನರ್‌ ರಚಿಸಿದ್ದು, ನಾಲ್ಕು ಪೂರ್ಣಾವಧಿ ಸದಸ್ಯರು ಮತ್ತು ಬಿಜೆಪಿ ಮಿತ್ರಪಕ್ಷಗಳು ಸೇರಿದಂತೆ 15 ಕೇಂದ್ರ ಸಚಿವರನ್ನು ಪದನಿಮಿತ್ತ ಸದಸ್ಯರು ಅಥವಾ ವಿಶೇಷ ಆಹ್ವಾನಿತರನ್ನಾಗಿ ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷರಾಗಿ ಉಳಿದಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಥಶಾಸ್ತ್ರಜ್ಞ ಸುಮನ್ ಕೆ ಬೆರಿ ಅವರು ನೀತಿ ಆಯೋಗದ ಉಪಾಧ್ಯಕ್ಷರಾಗಿ ಮುಂದುವರಿಯುತ್ತಾರೆ.

ವಿಜ್ಞಾನಿ ವಿ ಕೆ ಸಾರಸ್ವತ್, ಕೃಷಿ ಅರ್ಥಶಾಸ್ತ್ರಜ್ಞ ರಮೇಶ್ ಚಂದ್, ಮಕ್ಕಳ ತಜ್ಞ ವಿ ಕೆ ಪಾಲ್ ಮತ್ತು ಮ್ಯಾಕ್ರೋ-ಎಕನಾಮಿಸ್ಟ್ ಅರವಿಂದ ವೀರಮಾನಿ ಅವರು ಸರ್ಕಾರದ ಚಿಂತಕರ ಚಾವಡಿಯ ಪೂರ್ಣಾವಧಿ ಸದಸ್ಯರಾಗಿ ಮುಂದುವರಿಯಲಿದ್ದಾರೆ.

ನಾಲ್ವರು ಪದನಿಮಿತ್ತ ಸದಸ್ಯರು ರಾಜನಾಥ್ ಸಿಂಗ್ (ರಕ್ಷಣಾ ಖಾತೆ ಸಚಿವ ), ಅಮಿತ್ ಶಾ (ಗೃಹ ಖಾತೆ ಸಚಿವ), ಶಿವರಾಜ್ ಸಿಂಗ್ ಚೌಹಾಣ್ (ಕೃಷಿ ಖಾತೆ ) ಮತ್ತು ನಿರ್ಮಲಾ ಸೀತಾರಾಮನ್ (ಹಣಕಾಸು ಖಾತೆ).

ನೀತಿ ಆಯೋಗದ ಪರಿಷ್ಕೃತ ಸಂಯೋಜನೆಯನ್ನು ಪ್ರಧಾನಿ ಅನುಮೋದಿಸಿದ್ದಾರೆ ಎಂದು ಅಧಿಸೂಚನೆ ತಿಳಿಸಿದೆ. ಪುನರ್ ರಚಿಸಲಾದ ನೀತಿ ಆಯೋಗದ ವಿಶೇಷ ಆಹ್ವಾನಿತರು ಕೇಂದ್ರ ಸಚಿವರಾದ ನಿತಿನ್ ಗಡ್ಕರಿ (ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳು ಖಾತೆ ಸಚಿವರು), ಜಗತ್ ಪ್ರಕಾಶ್ ನಡ್ಡಾ (ಆರೋಗ್ಯ ಇಲಾಖೆ ಸಚಿವರು) ಒಳಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video