ಅನ್ವಿ ಕಾಮ್ದಾರ್ Photo | Instagram
ದೇಶ

ಮಹಾರಾಷ್ಟ್ರ: ವಿಡಿಯೋ ಮಾಡುವ ವೇಳೆ ಜಲಪಾತದ ಕಮರಿಗೆ ಬಿದ್ದು ರೀಲ್ಸ್ ಸ್ಟಾರ್ ಅನ್ವಿ ಕಾಮ್ದಾರ್‌ ಸಾವು

27 ವರ್ಷದ ರೀಲ್ಸ್ ಸ್ಟಾರ್ ಅನ್ವಿ ಅವರು ತಮ್ಮ ಏಳು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಮಂಗಳವಾರ ಪಕ್ಕದ ರಾಯಗಡ ಜಿಲ್ಲೆಯ ಮಂಗಾಂವ್‌ನ ಪ್ರಸಿದ್ಧ ಕುಂಭೆ ಜಲಪಾತಕ್ಕೆ ತೆರಳಿದ್ದರು.

ಮುಂಬೈ: ರೀಲ್ಸ್ ಮೂಲಕ ಖ್ಯಾತಿ ಗಳಿಸಿದ್ದ ಮುಂಬೈ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಅನ್ವಿ ಕಾಮ್ದಾರ್‌ ಅವರು ಬುಧವಾರ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ವಿಡಿಯೋ ಮಾಡುವಾಗ ಜಲಪಾತದ ಕಮರಿಗೆ ಬಿದ್ದು ಸಾವನ್ನಪ್ಪಿದ್ದಾರೆ.

27 ವರ್ಷದ ರೀಲ್ಸ್ ಸ್ಟಾರ್ ಅನ್ವಿ ಅವರು ತಮ್ಮ ಏಳು ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಮಂಗಳವಾರ ಪಕ್ಕದ ರಾಯಗಡ ಜಿಲ್ಲೆಯ ಮಂಗಾಂವ್‌ನ ಪ್ರಸಿದ್ಧ ಕುಂಭೆ ಜಲಪಾತಕ್ಕೆ ತೆರಳಿದ್ದರು. ಜಲಪಾತದ ಬಳಿ ವಿಡಿಯೋ ಮಾಡುತ್ತಿದ್ದ ವೇಳೆ 300 ಅಡಿ ಆಳದ ಕಮರಿಗೆ ಬಿದ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ಮಂಗಾಂವ್ ಪೊಲೀಸ್ ಠಾಣೆಯ ಅಧಿಕಾರಿ ಪ್ರಕಾರ, ಮುಂಬೈನ ಮುಲುಂಡ್ ಪ್ರದೇಶದ ನಿವಾಸಿ ಕಾಮ್ದಾರ್ ಮಳೆಯ ನಡುವೆ ತಮ್ಮ ಸ್ನೇಹಿತರೊಂದಿಗೆ ಸುಂದರವಾದ ಜಲಪಾತಕ್ಕೆ ಬಂದಿದ್ದರು ಮತ್ತು ಸುತ್ತಮುತ್ತಲಿನ ರಮಣೀಯ ದೃಶ್ಯಗಳನ್ನು ವಿಡಿಯೋ ಮಾಡುತ್ತಿದ್ದಾಗ ಕಾಲು ಜಾರಿ ಕಮರಿಗೆ ಬಿದ್ದಿದ್ದಾರೆ ಎಂದು ಅವರು ಹೇಳಿದ್ದಾರೆ.

ಅನ್ವಿ ಕಮರಿಗೆ ಬಿದ್ದ ಬಗ್ಗೆ ಆಕೆಯ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಆರು ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ಬಳಿಕ ಅನ್ವಿಯನ್ನು ಕಮರಿಯಿಂದ ಹೊರತೆಗೆಯಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಅನ್ವಿ ಅವರನ್ನು ಹತ್ತಿರದ ಮಂಗಾವ್ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ನಂತರ ತಹಶೀಲ್ದಾರ್ ಮತ್ತು ಮನಗಾಂವ್ ಪೊಲೀಸ್ ಇನ್​ಸ್ಪೆಕ್ಟರ್​ ಸೇರಿದಂತೆ ಸ್ಥಳೀಯ ಅಧಿಕಾರಿಗಳು ಪ್ರವಾಸಿಗರು ಮತ್ತು ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT